ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ ಜಿಲ್ಲೆಯಾದ್ಯಂತ ವಿಶ್ವ ಪರಿಸರ ದಿನ ಆಚರಣೆ

ಸಸಿ ನೆಟ್ಟು ಪೋಷಣೆ ಮಾಡಲು ಗಣ್ಯರ ಸಲಹೆ
Last Updated 5 ಜೂನ್ 2020, 16:38 IST
ಅಕ್ಷರ ಗಾತ್ರ

ಯಾದಗಿರಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲೆಯಾದ್ಯಂತ ವಿವಿಧೆಡೆ ಸಸಿಗಳನ್ನು ನೆಡಲಾಯಿತು. ಈ ವೇಳೆ ಗಣ್ಯರು ಸಸಿ ನೆಟ್ಟು ಪೋಷಣೆ ಮಾಡುವಂತೆ ಸಲಹೆ ನೀಡಿದರು. ಸಸಿ ನೆಡುವುದರಿಂದ ಮಾತ್ರ ಪರಿಸರ ಸಂರಕ್ಷಣೆ ಆಗುವುದಿಲ್ಲ. ಬದಲಾಗಿ ಉಳಿಸಿ ಬೆಳೆಸುವುದರ ಮೂಲಕ ಆಗುತ್ತದೆ ಎಂದರು.

ಜಿಲ್ಲಾ ನ್ಯಾಯಾಲಯ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಮತ್ತು ಅರಣ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ‘ವಿಶ್ವ ಪರಿಸರ ದಿನಾಚರಣೆ’ ಅಂಗವಾಗಿ ಸಸಿ ನೆಡಲಾಯಿತು.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಸ್.ಶ್ರೀಧರ ಸಸಿ ನೆಡುವ ಮೂಲಕ ಕಾರ್ಯಕ್ರಮ ಉದ್ಫಾಟಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರಾದನಾಮದೇವ ಕೆ.ಸಾಲಮಂಟಪಿ,ಪ್ರಕಾಶ ಅರ್ಜುನ ಬನಸೊಡೆ, ಸಿವಿಲ್ ನ್ಯಾಯಾಧೀಶ ಮಲ್ಲಿಕಾರ್ಜುನ ಆರ್.ಎಂ., ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಕ್ಯಾತನಾಳ, ವಲಯ ಅರಣ್ಯಧಿಕಾರಿ ಸುನೀಲ್‍ಕುಮಾರ ಮನುರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಸಿ.ಎಸ್.ಮಾಲಿಪಾಟೀಲ ಹಾಗೂ ವಕೀಲರ ಸಂಘದ ಸದಸ್ಯರು ಮತ್ತು ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ಇದ್ದರು.

ಮಾಸ್ಕ್ ಬ್ಯಾನರ್ ಕಟ್ಟಿ ಕೊರೊನಾ ಜಾಗೃತಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಪ್ರಾದೇಶಿಕ ಅರಣ್ಯ ವಿಭಾಗ ಸಂಯುಕ್ತಾಶ್ರಯದಲ್ಲಿ ಕೊರೊನಾ ವೈರಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮಾಸ್ಕ್ ಚಿತ್ರಗಳ ಬ್ಯಾನರ್‍ಗಳನ್ನು ಹೊಸದಾಗಿ ನೆಟ್ಟ ಗಿಡಗಳಿಗೆ ಕಟ್ಟುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಜಿಲ್ಲಾಡಳಿತ ಭವನದ ಆವರಣದಲ್ಲಿ ಶುಕ್ರವಾರ ವಿನೂತನವಾಗಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಗಿಡನೆಟ್ಟು ಮಾತನಾಡಿ, ಕೊರೊನಾ ವೈರಸ್ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯವಿದೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆಯಿಂದ ನೆಡುತ್ತಿರುವ ಗಿಡಗಳಿಗೆ ಮಾಸ್ಕ್ ಚಿತ್ರಗಳ ಬ್ಯಾನರ್‌ಗಳನ್ನು ಕಟ್ಟುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

‌ಈವೇಳೆಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಶರ್ಮಾ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಇದ್ದರು.

ಉಪ ನಿರ್ದೇಶಕರ ಕಾರ್ಯಾಲಯ: ನಗರದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಾರ್ಯಾಲಯ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಅಧಿಕಾರಿ ಹಾಗೂ ಸಿಬ್ಬಂದಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮ ಆಚರಿಸಿದರು.

ಕಾರ್ಯಾಲಯದ ವ್ಯವಸ್ಥಾಪಕ ಶಿವಲಿಂಗಪ್ಪ, ಚನ್ನಬಸವ ರೆಡ್ಡಿ, ನಾಗರಾಜ, ರಾಮಶೆಟ್ಟಿ, ಚೆನ್ನಯ್ಯ ಹಿರೇಮಠ್, ರವೀಂದ್ರ ಕಾಕಿ, ಆದಪ್ಪ ಬಾಗಲಿ, ಮಲ್ಲಿಕಾರ್ಜುನ್ ಪಾಟೀಲ, ಹಣಮಂತ ಶಿವಾನಂದ್, ಲಕ್ಷ್ಮಣ ಕೆ ರಾಜಶೇಖರ್, ಮೈನುದ್ದಿನ್, ಶರ್ಫುದ್ದೀನ್, ಸೇವಕರಾದ ಸಿದ್ದಣ್ಣ, ನಾಮದೇವ್ ಮುರಳಿಇದ್ದರು. ನಗರ ಸಿಆರ್‌ಪಿ ರವಿಚಂದ್ರ ನಾಯ್ಕಲ್ ನಿರೂಪಿಸಿ ವಂದಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ: ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಕಚೇರಿ ಮುಂಭಾಗದ ರಸ್ತೆ ವಿಭಜಕಗಳಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಶುಕ್ರವಾರ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಕರವೇ ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ ಚಾಲನೆ ನೀಡಿದರು. ತಾಲ್ಲೂಕು ಅಧ್ಯಕ್ಷ ಮಲ್ಲು ಮಾಳಿಕೇರಿ, ಅಂಬ್ರೇಷ್ ಹತ್ತಿಮನಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ವಿಶ್ವಾರಾಧ್ಯ ದಿಮ್ಮೆ, ಸಿದ್ದು ನಾಯಕ ಹತ್ತಿಕುಣಿ, ಸಾಹೇಬಗೌಡ ನಾಯಕ, ಸಾಬು ಹೋರುಂಚಾ, ದೀಪಕ ಒಡೆಯರ್, ಅಬ್ದುಲ್ ಅಜೀಜ್, ಕಾಶಿನಾಥ ನಾನೇಕ, ಮೌನೇಶ, ಗೋವಿಂದ ರಾಠೋಡ, ಅಂಬಣ್ಣ ಹೋರುಂಚಾ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT