ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಾಹಿತ್ಯ ಸಮ್ಮೇಳನ: ಸ್ಮರಣ ಸಂಚಿಕೆಗೆ ಲೇಖನಗಳ ಆಹ್ವಾನ’

Published 1 ಫೆಬ್ರುವರಿ 2024, 15:38 IST
Last Updated 1 ಫೆಬ್ರುವರಿ 2024, 15:38 IST
ಅಕ್ಷರ ಗಾತ್ರ

ಶಹಾಪುರ: ತಾಲ್ಲೂಕಿನ ಭೀಮರಾಯನಗುಡಿಯಲ್ಲಿ ಫೆಬ್ರುವರಿ ಕೊನೆಯ ವಾರದಲ್ಲಿ ತಾಲ್ಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಅದರ ಅಂಗವಾಗಿ ಸಮ್ಮೇಳನದ ಸ್ಮರಣ ಸಂಚಿಕೆಗೆ ಲೇಖನಗಳನ್ನು ಆಹ್ವಾನಿಸಲಾಗಿದೆ ಎಂದು ಸ್ಮರಣ ಸಂಚಿಕೆಯ ಪ್ರಧಾನ ಸಂಪಾದಕ ಬಸವರಾಜ ಶಿಣ್ಣೂರ ತಿಳಿಸಿದ್ದಾರೆ.

ಲೇಖಕರು ಶಹಾಪುರ ತಾಲ್ಲೂಕಿನ ಕನ್ನಡ, ನಾಡು-ನುಡಿ ನೆಲ-ಜಲ, ಕಲೆ, ಸಾಹಿತ್ಯ ಸಂಸ್ಕೃತಿಗೆ ಸಂಬಂಧಿಸಿದ ಮೂರು ಪುಟಗಳಿಗೆ ಮೀರದಂತೆ ಅಥವಾ ಕವನ, ಚುಟುಕು, ಹನಿಗವನಗಳು, ಕನ್ನಡ ನುಡಿ ಮುತ್ತುಗಳು..ಇತ್ಯಾದಿಗಳನ್ನು ಕಳಿಸುವವರು ನುಡಿ ತಂತ್ರಾಂಶದಲ್ಲಿ ಟೈಪ್ ಮಾಡಿದ ಬರಹಗಳನ್ನು ಜತೆಗೆ ಲೇಖಕರ ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಿರಬೇಕು. ಲೇಖನಗಳನ್ನು ಸ್ವೀಕರಿಸಲು ಫೆಬ್ರವರಿ 10 ಕೊನೆಯ ದಿನವಾಗಿರುತ್ತದೆ. ಲೇಖನಗಳ ಆಯ್ಕೆ ಬಗ್ಗೆ ಸಂಪಾದಕ ಮಂಡಳಿಯ ತೀರ್ಮಾನವೆ ಅಂತಿಮ ನಿರ್ಧಾರವಾಗಿರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ 9902965535, 9902570037, 9901559873 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT