ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ನವೆಂಬರ್ 19ರಂದು ಜನಸ್ವರಾಜ್‌ ಸಮಾವೇಶ– ಶಾಸಕರಿಂದ ಪರಿಶೀಲನೆ

Last Updated 19 ನವೆಂಬರ್ 2021, 2:39 IST
ಅಕ್ಷರ ಗಾತ್ರ

ಯಾದಗಿರಿ: ವಿಧಾನ ಪರಿಷತ್ ಚುನಾವಣೆ ಅಂಗವಾಗಿ ನವೆಂಬರ್ 19ರಂದು ನಗರದ ಗ್ರಾಮೀಣ ಪೊಲೀಸ್‌ ಠಾಣೆ ಸಮೀಪದ ವನಿಕೇರಿ ಲೇಔಟ್‌ನಲ್ಲಿ ಬಿಜೆಪಿಯಿಂದ ಜನಸ್ವರಾಜ್ ಸಮಾವೇಶ ಆಯೋಜಿಸಲಾಗಿದ್ದು, ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರು ಗುರುವಾರ ಸ್ಥಳ ಪರಿಶೀಲನೆ ನಡೆಸಿದರು.

ಅಂದುಮಧ್ಯಾಹ್ನ 3 ಗಂಟೆಗೆ ಸಮಾವೇಶ ನಡೆಯಲಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರು ಸೇರಿದಂತೆ ಸಚಿವರು, ಶಾಸಕರು, ಪದಾಧಿಕಾರಿಗಳು ಆಗಮಿಸಲಿದ್ದಾರೆ.

ಈ ವೇಳೆ ಮಾತನಾಡಿದ ಶಾಸಕರು, ‘ವನಿಕೇರಿ ಲೇಔಟ್‌ನಲ್ಲಿ ಜನಸ್ವರಾಜ್‌ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಮತದಾರರು, ಪದಾಧಿಕಾರಿಗಳು ಭಾಗಹಿಸಲಿದ್ದಾರೆ. ಹೀಗಾಗಿ ಸಿದ್ದತೆ ಪರಿಶೀಲಿಸಿದ್ದೇನೆ’ ಎಂದರು.

4 ಸಾವಿರ ಮಂದಿಗೆ ಆಸನದ ವ್ಯವಸ್ಥೆ ಕಲ್ಪಿಸಲಾಗಿದ್ದು, ವೇದಿಕೆಯಲ್ಲಿ 50ಕ್ಕೂ ಹೆಚ್ಚು ಜನರು ಆಸೀನರಾಗುವಂತೆ ಸಿದ್ಧಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಇದೇ ವೇಳೆ ವೇದಿಕೆ ನಿರ್ಮಾಣ ಜಾಗದಲ್ಲಿ ಕಳೆ ಸಸ್ಯಗಳನ್ನು ತೆರವುಗೊಳಿಸುವಂತೆ ಕಾರ್ಯಕರ್ತರಿಗೆ ಸೂಚಿಸಿದರು.

ಈ ವೇಳೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಶರಣಭೂಪಾಲರೆಡ್ಡಿ, ‘ಯೂಡಾ’ ಅಧ್ಯಕ್ಷ ಬಸವರಾಜ ಚಂಡ್ರಕಿ, ಮುಖಂಡರಾದ ಖಂಡಪ್ಪ ದಾಸನ್‌, ಸಿದ್ದಣಗೌಡ ಕಾಡಂನೋರ, ಶರಣಗೌಡ ಬಾಡಿಯಾಳ, ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ, ನಗರಸಭೆ ಸದಸ್ಯರಾದ ಸ್ವಾಮಿದೇವ ದಾಸನಕೇರಿ, ಹಣಮಂತ ಇಟಗಿ, ಅಂಬಯ್ಯ ಶಾಬಾದಿ, ಪ್ರಧಾನ ಕಾರ್ಯದರ್ಶಿಗಳಾದ ದೇವಿಂದ್ರನಾಥ ನಾದ್, ಗುರು ಕಾಮಾ, ನಗರ ಮಂಡಲ ಅಧ್ಯಕ್ಷ ಸುರೇಶ ಅಂಬಿಗೇರ, ರಮೇಶ ದೊಡಮನಿ, ಅನಿಲ್‌ ಕರಾಟೆ ಮಾಧ್ಯಮ ವಕ್ತಾರ ವಿರೂಪಾಕ್ಷಯ್ಯ ಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT