ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ– ಅಧ್ಯಕ್ಷ ಡಾ.ಅಂಥೋಣಿ ಸೆಬಾಸ್ಟಿಯನ್

ಮಕ್ಕಳ ಕಲಿಕೆಯ ಪ್ರಾರಂಭದ ಹಂತಕ್ಕೆ ಉನ್ನತ ಗುಣಮಟ್ಟ ಶಿಕ್ಷಣದ ಜೊತೆಗೆ ಪೂರಕ ವಾತಾವರಣ ಅಗತ್ಯ: ಡಾ.ಅಂಥೋಣಿ
Last Updated 29 ಸೆಪ್ಟೆಂಬರ್ 2021, 16:20 IST
ಅಕ್ಷರ ಗಾತ್ರ

ಯಾದಗಿರಿ: ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಮಕ್ಕಳ ಕಲಿಕೆಯ ಆರಂಭಿಕ ಹಂತದಲ್ಲಿಯೇ ಉನ್ನತ ಗುಣಮಟ್ಟ ಕಲಿಕೆಯ ಜತೆಗೆ ಉತ್ತಮವಾದ ಪರಿಸರದಲ್ಲಿ ಬೆಳೆಯುವುದೂ ಅಷ್ಟೇ ಮುಖ್ಯವಾಗಿದೆ ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಡಾ.ಅಂಥೋಣಿ ಸೆಬಾಸ್ಟಿಯನ್ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆರ್‌ಟಿಇ 2009, ಫೋಕ್ಸೋ 2012 ಹಾಗೂ ಬಾಲ ನ್ಯಾಯ ಕಾಯ್ದೆ 2015ರ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಶಿಕ್ಷಣದಿಂದ ವಂಚಿತರಾದ ಮಕ್ಕಳನ್ನು ಮರಳಿ ಶಾಲೆಗೆ ತರುವ ಪ್ರಯತ್ನಕ್ಕೆ ಅಧಿಕಾರಿಗಳು ಮುಂದಾಗಬೇಕು. ಶಾಲೆಗಳಿಗೆ ಸೌಕರ್ಯಗಳನ್ನು ಒದಗಿಸುವುದರ ಜತೆಗೆ ಮಕ್ಕಳ ರಕ್ಷಣೆಯು ಮುಖ್ಯವಾಗಿದೆ ಎಂದು ಹೇಳಿದರು.

ಕುಡಿಯುವ ನೀರಿನ ಸಮಸ್ಯೆ, ಶೌಚಾಲಯದ ಸಮಸ್ಯೆ ಹಾಗೂ ಶಿಕ್ಷಕರ ಕೊರತೆ ಇತ್ಯರ್ಥವಾಗಬೇಕು. ಸಮಯಕ್ಕೆ ಅನುಗುಣವಾಗಿ ಶಿಕ್ಷಣ ನೀಡುವುದರಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಮಕ್ಕಳ ರಕ್ಷಣಾ ಮತ್ತು ಅಭಿವೃದ್ಧಿಗೆ ಇರುವ ಸಮಸ್ಯೆಗಳನ್ನು ಇಲಾಖೆಯ ಅಧಿಕಾರಿಗಳು ಮೇಲಾಧಿಕಾರಿ ಗಮನಕ್ಕೆ ತರಬೇಕು. ಅವರ ಜತೆ ಸಭೆ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಮಾತನಾಡಿ, ಮಕ್ಕಳ ಸಹಾಯವಾಣಿಗಾಗಿ ದೇಶಾದ್ಯಂತ 1098 ಸಂಖ್ಯೆ ಇದೆ. ಬಾಲ್ಯ ವಿವಾಹ, ಬಾಲಕಾರ್ಮಿಕರು, ಭಿಕ್ಷಾಟನೆ, ಮಕ್ಕಳ ಮಾರಾಟ, ಕಾಣೆಯಾದ ಮಕ್ಕಳು, ನಿರ್ಗತಿಕ ಮಕ್ಕಳು, ಬೀದಿ ಮಕ್ಕಳು, ವಲಸೆ ಮಕ್ಕಳು, ವಿಕಲ ಚೇತನ ಮಕ್ಕಳು, ಮಾದಕ ವಸ್ತುಗಳ ವ್ಯಸನಿ ಮಕ್ಕಳು, ಹಿಂಸೆ ಮತ್ತು ದೌರ್ಜನ್ಯಕ್ಕೆ ಒಳಗಾದ 18 ವರ್ಷ ದೊಳಗಿನ ಸಂಕಷ್ಟದಲ್ಲಿ ಸಿಲುಕಿರುವ, ರಕ್ಷಣೆ ಮತ್ತು ಪೋಷಣೆಗೆ ಅವಶ್ಯಕತೆ ಇರುವ ಮಕ್ಕಳಿಗೆ ತುರ್ತು ಸೇವೆಯನ್ನು ಒದಗಿಸಲು ಈ ಸಂಖ್ಯೆಗೆ ಕರೆ ಮಾಡಬಹುದು. ಈ ಮೂಲಕ ನೆರವು ಪಡೆಯಬಹುದಾಗಿದೆ ಎಂದರು.

ಈ ಸಂಖ್ಯೆಯು ಉಚಿತ ದೂರವಾಣಿಯಾಗಿದ್ದು, ಮಕ್ಕಳಾಗಲಿ ಅಥವಾ ಸಾರ್ವಜನಿಕರಾಗಲಿ ಕರೆಮಾಡುವ ಮೂಲಕ ತುರ್ತು ನೆರವು ಅಗತ್ಯವಿರುವ ಮಕ್ಕಳಿಗೆ ರಕ್ಷಣೆ ಒದಗಿಸಲಾಗುತ್ತದೆ ಎಂದು ಹೇಳಿದರು.

ಆಯೋಗದ ಸದಸ್ಯ ಶಂಕರಪ್ಪ ಡಿ. ಅವರು ಮಾತನಾಡಿ, ಜಿಲ್ಲೆಯ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣಾ ಸಮಿತಿ ರಚಿಸಿ, ಕಡ್ಡಾಯವಾಗಿ ಮಕ್ಕಳ ಹಕ್ಕುಗಳ ಕುರಿತು ಗ್ರಾಮ ಸಭೆಗಳು ಜರುಗುವಂತೆ ನೋಡಿಕೊಳ್ಳಬೇಕು. ಸರ್ಕಾರದಿಂದ ಸಿಗುವ ಸೌಲಭ್ಯಗಳಿಂದ ಮಕ್ಕಳ ವಂಚಿತರಾಗಬಾರದು. ಇದಕ್ಕೆ ಅಧಿಕಾರಿಗಳು ಜವಾಬ್ದಾರರು. ಬಾಲ ಅಪರಾಧಿಗಳಿಗೆ ಪೂರಕವಾದ ವಾತಾವರಣ ಕಲ್ಪಿಸುವುದು ಮುಖ್ಯ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾಶರ್ಮಾ ಮಾತನಾಡಿ, ವಸತಿ ಶಾಲೆಗಳಲ್ಲಿರುವ ಕುಡಿಯುವ ನೀರಿನ ಸಮಸ್ಯೆ, ಶೌಚಾಲಯಗಳ ದುರಸ್ತಿ ಹಾಗೂ ನ್ಯಾಪ್‍ಕೀನ್‌ ಬರ್ನಿಂಗ್‌ ಯಂತ್ರಗಳನ್ನು ವಿತರಿಸುವ ಕುರಿತು ಕಮಿಷನರ್‌ಗಳ ಜತೆ ಚರ್ಚಿ ನಡೆಸಿ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ಹೇಳಿದರು.

ಸಭೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಅಶೋಕ ಜಿ.ಯರಗಟ್ಟಿ, ಭಾರತಿ, ಜಯಶ್ರೀ ಅವರು ಮಾತನಾಡಿದರು.

ಆಯೋಗದ ಸದಸ್ಯರಾದ ರಾಘವೇಂದ್ರ ಎಚ್.ಸಿ, ಪರಶುರಾಮ ಎಂ.ಎಲ್, ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ ಕವಿತಾಳ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಲ್ಲಪ್ಪ ದೇಸಾಯಿ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಹಣಮಂತ್ರಾಯ ಕರಡಿ, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾದ ಚಂದ್ರಶೇಖರ ಲಿಂಗದಹಳ್ಳಿ, ಮಾಳಪ್ಪ ವಂಟೂರ, ಬಿ.ಜಿ.ಪಾಟೀಲ, ಗೀತಾ ಜಿ.ಎಚ್ ಇದ್ದರು.

***

ಜಿಲ್ಲೆಯಲ್ಲಿ ಭಿಕ್ಷಾಟನೆ, ಬಾಲಕಾರ್ಮಿಕ, ನಿರಾಶ್ರಿತ, ಬಾಲ್ಯವಿವಾಹದಂತಹ ಸಮಸ್ಯೆಯ ಸುಳಿಗೆ ಸಿಲುಕಿರುವ ಮಕ್ಕಳ ಸಂಪೂರ್ಣ ವರದಿ ನೀಡಬೇಕು

- ಡಾ.ಅಂಥೋಣಿ ಸೆಬಾಸ್ಟಿಯನ್,ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT