ಮಂಗಳವಾರ, ಏಪ್ರಿಲ್ 20, 2021
24 °C

ಯಾದಗಿರಿ: ಪತ್ರಕರ್ತರ ಸಂಘಕ್ಕೆ ಸಿನ್ನೂರು ನೂತನ ಜಿಲ್ಲಾಧ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯುಜೆ) ಅಧ್ಯಕ್ಷರಾಗಿ ಇಂದುಧರ ಸಿನ್ನೂರು ಆಯ್ಕೆಯಾದರು.

ನಗರದ ಹಳೆ ಪ್ರವಾಸಿ ಮಂದಿರದಲ್ಲಿ ಭಾನುವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಇತ್ತೀಚಿಗೆ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಬಿ.ಎಂ.ಜಗದೀಶ ಅವರು ರಾಜೀನಾಮೆ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನ ತೆರವಾಗಿತ್ತು.

ಇಂದುಧರ ಸಿನ್ನೂರು 7 ಪಡೆದರೆ, ಮಲ್ಲಪ್ಪ ಸಂಕೀನ್‌ 3 ಮತಗಳನ್ನು ಪಡೆದರು. 2 ಮತಗಳು ತಿರಸ್ಕೃತವಾದವು.

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ಸಂಜೀವರಾವ ಕುಲಕರ್ಣಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಣಿ ಸಭೆಯಲ್ಲಿ ನೂತನ ಅಧ್ಯಕ್ಷರನ್ನು ಘೋಷಣೆ ಮಾಡಲಾಯಿತು.

‘ಉಳಿದಿರುವ 8 ತಿಂಗಳ ಅವಧಿಯಲ್ಲಿ ಸಂಘಕ್ಕೆ ಬೇಕಾದ ಸೌಲಭ್ಯಗಳನ್ನು ಪಡೆಯಲು ಪ್ರಯತ್ನಿಸಿ. ದಕ್ಷತೆಯಿಂದ ಕಾರ್ಯನಿರ್ವಹಿಸಿ’ ಎಂದು ರಾಜ್ಯ ಕಾರ್ಯದರ್ಶಿ ಆದ ಚುನಾವಣಾಧಿಕಾರಿ ಸಂಜೀವರಾವ ಕುಲಕರ್ಣಿ ಹೇಳಿದರು.

ಸಭೆಯಲ್ಲಿ ರಾಜ್ಯ ಪರಿಷತ್ ಸದಸ್ಯ ಅನಿಲ ದೇಶಪಾಂಡೆ, ಪ್ರಧಾನ ಕಾರ್ಯದರ್ಶಿ ರವೀಂದ್ರ ಕುಲಕರ್ಣಿ, ಗ್ರಾಮೀಣ ಉಪಾಧ್ಯಕ್ಷ ಗುಂಡಭಟ್ ಜೋಶಿ ಕೆಂಭಾವಿ, ನಾಗಪ್ಪ ಮಾಲಿಪಾಟೀಲ, ಲಕ್ಷ್ಮೀಕಾಂತ ಕುಲಕರ್ಣಿ, ಸೈಯದ್‌ ಸಾಜೀದ್‌ ಹೈಯಾತ್‌, ಸಾಗರ ದೇಸಾಯಿ, ದುರ್ಗೇಶ ಮಂಗಿಹಾಳ, ನಾಗೇಂದ್ರ ಠಾಕೂರ, ರಾಜಕುಮಾರ ನಳ್ಳಿಕರ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು