ಮಂಗಳವಾರ, ಫೆಬ್ರವರಿ 7, 2023
26 °C

ಯಾದಗಿರಿ। ಲೋಕ ಅದಾಲತ್‌ನಲ್ಲಿ 5,315 ಪ್ರಕರಣ ಇತ್ಯರ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ಜಿಲ್ಲೆಯಾದ್ಯಂತ ನ.12 ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಸುಮಾರು 5,315 ಪ್ರಕರಣಗಳು ರಾಜಿ ಮೂಲಕ ಇತ್ಯರ್ಥಗೊಂಡು ₹5.40 ಕೋಟಿ ಹಣ ಸಂಗ್ರಹವಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶ ಸಾಹೀಲ್ ಅಹ್ಮದ್ ಎಸ್.ಕುನ್ನಿಭಾವಿ  ತಿಳಿಸಿದ್ದಾರೆ.

ಯಾದಗಿರಿ ಹಿರಿಯ ನ್ಯಾಯಾಲಯದಲ್ಲಿ 442, ಶಹಾಪುರ 340, ಸುರಪುರ ನ್ಯಾಯಾಲಯ 1,331, ಯಾದಗಿರಿಯ ನ್ಯಾಯಾಧೀಶರ ನ್ಯಾಯಾಲಯದಲ್ಲಿ 282, ಸುರಪುರ ನ್ಯಾಯಾಧೀಶರ ನ್ಯಾಯಾಲಯದಲ್ಲಿ 703, ಸುರಪುರ ನ್ಯಾಯಾಧೀಶರ ನ್ಯಾಯಾಲಯದಲ್ಲಿ 749, ಒಂದನೇ ಹೆಚ್ಚುವರಿ ನ್ಯಾಯಾಲಯ ಯಾದಗಿರಿಯಲ್ಲಿ 314, ಒಂದನೇ ಹೆಚ್ಚುವರಿ ನ್ಯಾಯಾಲಯ ಶಹಾಪುರದಲ್ಲಿ 387, ಒಂದನೇ ಹೆಚ್ಚುವರಿ ನ್ಯಾಯಾಲಯ ಸುರಪುರದಲ್ಲಿ 972 ಪ್ರಕರಣಗಳು ಇತ್ಯರ್ಥವಾಗಿವೆ ಎಂದು ಮಾಹಿತಿ ನೀಡಿದ್ದಾರೆ.

10 ಪೀಠಗಳನ್ನು ಮಾಡಲಾಗಿತ್ತು. ರಾಷ್ಟ್ರೀಯ ಲೋಕ ಅದಾಲತ್ ನ್ಯಾಯಾಲಯದಲ್ಲಿ 4 ಪ್ರಕರಣಗಳಲ್ಲಿ ವಿವಾಹ ವಿಚ್ಛೇದನಕ್ಕಾಗಿ ಮಾಡಿದ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಒಂದುಗೂಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾ ನ್ಯಾಯಾಧೀಶ ಬಿ.ನಂದಕುಮಾರ ಮಾರ್ಗದರ್ಶನದಂತೆ ಜಿಲ್ಲೆಯಾದ್ಯಂತ ನ್ಯಾಯಾಧೀಶರು ಕೌಟುಂಬಿಕ ನ್ಯಾಯ ವಿಚ್ಛೇದನ ಕೋರಿದ್ದ ಸತಿ-ಪತಿಗಳನ್ನು ಮನವೊಲಿಸುವ ಪ್ರಯತ್ನ ನಡೆಸಿ ನಾಲ್ಕು ಜೋಡಿಗಳನ್ನು ಒಂದು ಮಾಡಿದ್ದಾರೆ. ಆಸ್ತಿ ಪಾಲಿಗಾಗಿ ಹಾಕಿದ 49 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ನ್ಯಾಯಾಧೀಶರು ಇತ್ಯರ್ಥ ಪಡಿಸಿದರು. ಸುಮಾರು 26 ವಾಹನ ಅಪಘಾತದ ಪ್ರಕರಣಗಳು ಇತ್ಯರ್ಥವಾಗಿವೆ. ಬ್ಯಾಂಕ್ ಪ್ರಕರಣಗಳು 6, ಸಾಲ ವಸೂಲಿಗಾಗಿ ಹಾಕಿದ ಪ್ರಕರಣಗಳು 4, ಸ್ಪೆಷಫಿಕ್ ಪರ್ಫಾರ್ಮೆನ್ಸ್ ಕೇಸ್ 15, ಜನನ ಮತ್ತು ಮರಣ 1,325 ಪ್ರಕರಣಗಳು ಜಿಲ್ಲೆಯಾದ್ಯಂತ ಇತ್ಯರ್ಥಗೊಂಡಿವೆ ಎಂದು ಮಾಹಿತಿ ನೀಡಿದ್ದಾರೆ.

ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜಿ ಆಗಬಹುದಾದ ಸುಮಾರು 1,362 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಸೇರಿ ಒಟ್ಟು 6,677 ರಾಜಿ ಸಂಧಾನ ಮೂಲಕ ಇತ್ಯರ್ಥಗೊಂಡಿವೆ. ಇವುಗಳಲ್ಲಿ 240 ವಿಭಾಗದ ದಾವೆಗಳು, 33 ಚೆಕ್ ಬೌನ್ಸ್ ಪ್ರಕರಣಗಳು ಸೇರಿವೆ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು