ಯಾದಗಿರಿ: 65 ಗ್ರಾಂ ಚಿನ್ನದ ಸರ ಕಳವು

ಯಾದಗಿರಿ: ನಗರದ ಲಕ್ಷ್ಮೀ ದೇವಸ್ಥಾನದ ಬಳಿ 65 ಗ್ರಾಂ ಚಿನ್ನದ ಸರ ಕಳ್ಳತನ ಆಗಿರುವ ಘಟನೆ ಶುಕ್ರವಾರ ನಡೆದಿದೆ.
ಇಬ್ಬರು ಪಲ್ಸರ್ ಮೋಟರ್ ಸೈಕಲ್ ಮೇಲೆ ಬಂದು ದೇವಸ್ಥಾನದ ಬಳಿ ತೆರಳುತ್ತಿದ್ದ ಮಹಿಳೆಯ ಸರ ಕದ್ದು ಪರಾರಿಯಾಗಿದ್ದಾರೆ.
ಆರೋಪಿಗಳಲ್ಲಿ ಹಿಂದೆ ಕುಳಿತ್ತಿದ್ದ ವ್ಯಕ್ತಿ ಬಿಳಿ ಟಿ-ಶರ್ಟ್ ಮತ್ತು ಕ್ಯಾಪ್ ಹಾಗೂ ಜೀನ್ಸ್ ಪ್ಯಾಂಟ್ ಧರಿಸಿದ್ದು, ಈ ಕುರಿತು ಆರೋಪಿಗಳ ಪತ್ತೆಗಾಗಿ ಯಾದಗಿರಿ ನಗರ ಠಾಣೆ ಅಧಿಕಾರಿ ಸಿಬ್ಬಂದಿ ಹಾಗೂ ಸಿಪಿಐ ಮತ್ತು ಡಿಎಸ್ಪಿ ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.