ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಗಮನಸೆಳೆದ ಯೋಗ ಪ್ರದರ್ಶನ

ನಗರದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ, ಮನಸೂರೆಗೊಂಡ ಮಲ್ಲಗಂಬ ಪ್ರದರ್ಶನ
Last Updated 22 ಜೂನ್ 2022, 1:27 IST
ಅಕ್ಷರ ಗಾತ್ರ

ಯಾದಗಿರಿ: ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನ (ಸ್ವಪ್ನ ಗ್ರೌಂಡ್) ದಲ್ಲಿ ಮಂಗಳವಾರ ನಡೆದ 8ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಸಾಮೂಹಿಕ ಯೋಗ ಪ್ರದರ್ಶನ
ಮಾಡಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ, ಪತಂಜಲಿ ಯೋಗ ಸಮಿತಿ ಹಾಗೂ ಸರ್ಕಾರದ ಇಲಾಖೆಗಳ ಸಹಯೋಗದಲ್ಲಿ ಯೋಗ ದಿನ
ಆಚರಿಸಲಾಯಿತು.

ಸೂರ್ಯ ಮೂಡುವುದಕ್ಕಿಂತ ಮುಂಚಿತವಾಗಿ ಯೋಗಪಟುಗಳು ಮೈದಾನದಲ್ಲಿ ಸೇರಿದ್ದರು. ಶಾಲಾ–ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಆಗಮಿಸಿ ಯೋಗ ದಿನಾಚರಣೆಗೆ ಮೆರುಗು
ತಂದರು.

ಪತಂಜಲಿ ಯೋಗ ಸಮಿತಿ ಸಂಚಾಲಕ ಅನಿಲ್ ಗುರುಜಿ ಅವರು ಯೋಗಾಸನದ ವಿವಿಧ ಭಂಗಿಗಳನ್ನು ಜನಪ್ರತಿನಿಧಿಗಳು, ಅಧಿಕಾರಿ, ಸಿಬ್ಬಂದಿ, ವಿದ್ಯಾರ್ಥಿಗಳು ಸೇರಿದಂತೆ ನಗರದ ನಾಗರಿಕರಿಗೆ ಯೋಗ ಅಭ್ಯಾಸ ಮಾಡಿಸಿದರು.

ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರು ಸಸಿಗೆ ನೀರು ಹಾಕುವ ಮೂಲಕ ಯೋಗ ದಿನಾಚರಣೆಗೆ ಚಾಲನೆ ನೀಡಿದರು.

ಜಿಲ್ಲಾಧಿಕಾರಿ ಸ್ನೇಹಲ್ ಆರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹ ಣಾಧಿಕಾರಿ ಅಮರೇಶ್ ನಾಯ್ಕ್‌, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ, ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಉಪವಿಭಾಗಾಧಿಕಾರಿ ಶಾ ಆಲಂ ಹುಸೇನ್, ಲೋಕಾಯುಕ್ತ ಎಸ್.ಪಿ.ಎ.ಆರ್.ಕರ್ನೂಲ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಾಂತಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಭಾಕರ್, ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ, ಬಸವ ಯೋಗ ಟ್ರಸ್ಟ್‌ನ ಅಧ್ಯಕ್ಷ ಸೋಮನಾಥರೆಡ್ಡಿ, ಬಕ್ಕಪ್ಪ ಹೊಸಮನಿ ಸೇರಿದಂತೆ ಹಲವು ಗಣ್ಯರು, ನಾಗರಿಕರು ಯೋಗಾಭ್ಯಾಸದಲ್ಲಿ ಆಸಕ್ತಿಯಿಂದ ಭಾಗವಹಿಸಿದರು.

ಯೋಗಾಭ್ಯಾಸ ಅಂಗವಾಗಿ ವಿವಿಧ ಯೋಗ ಪ್ರದರ್ಶನಗಳಾದ ಮಕರಾಸನ, ವೃಕ್ಷಾಸನ, ಭುಜಂಗಾಸನ, ವಜ್ರಾಸನ, ದಂಡಾಸನ ಸೇರಿದಂತೆ ವಿವಿಧ ಪ್ರಕಾರದ ಯೋಗ ಪ್ರದರ್ಶನದಲ್ಲಿ ಎಲ್ಲರೂ ಆಸಕ್ತಿಯಿಂದ
ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ರಾಜನಕೋಳೂರ, ಗೆದ್ದಲಮರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳ ಮುಕ್ತ ಮಲ್ಲಕಂಬ ಹಾಗೂ ರಾಷ್ಟ್ರೀಯ ಸ್ಕಿಪಿಂಗ್ ಸ್ಪರ್ಧೆಗೆ ಆಯ್ಕೆಯಾದ ಮಕ್ಕಳ ಸ್ಕಿಪಿಂಗ್ ಪ್ರದರ್ಶನವು
ಹಾಗೂ ಸಾಯಿ ಯೋಗ ನೃತ್ಯ ಶಾಲೆಯವರಿಂದ ನೃತ್ಯ ಪ್ರದರ್ಶನವು ಎಲ್ಲರ ಗಮನ ಸೆಳೆಯಿತು.

ಈ ಯೋಗ ದಿನಾಚರಣೆ ಅಂಗವಾಗಿ ಯೋಗ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಜಿಲ್ಲಾ ಆಯುಷ್‌ ಅಧಿಕಾರಿ ವಂದನಾ ಗಾಳಿ ಸ್ವಾಗತಿಸಿದರು. ಡಾ.ಪ್ರಕಾಶ ರಾಜಾಪುರ, ಸಂಗಮೇಶ ಸಂಗಾಪುರ
ನಿರ್ವಹಿಸಿದರು.

ಪತಂಜಲಿಯ ಯೋಗ ಸಮಿತಿ, ವಿವಿಧ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು, ಸ್ಕೌಟ್ಸ್-ಗೈಡ್ಸ್‌ನ ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT