ಯಾದಗಿರಿ: ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯುತ್ಸವವನ್ನು ಮಂಗಳವಾರ ಸಂಭ್ರಮದಿಂದ ಆಚರಿಸಲು ನಗರದ ಅಂಬೇಡ್ಕರ್ ವೃತ್ತ ಸಜ್ಜಾಗಿದೆ.

ವೃತ್ತದ ಸುತ್ತಲೂ, ರಸ್ತೆಗಳ ಬದಿ, ವಿಭಜಕಗಳಲ್ಲಿ ನೀಲಿ ಹಾಗೂ ಬೌದ್ಧ ಧಮ್ಮದ ಪಂಚಶೀಲ ಧ್ವಜಗಳನ್ನು ಕಟ್ಟಲಾಗಿದೆ. ಜಯಂತಿ ಶುಭಾಶಯದ ಬೃಹತ್ ಬ್ಯಾನರ್, ಫ್ಲೆಕ್ಸ್ಗಳನ್ನು ಸಹ ಹಾಕಲಾಗಿದೆ. ಇಡೀ ವೃತ್ತವನ್ನು ಬಣ್ಣ–ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ.

ಜಯಂತಿ ಅಂಗವಾಗಿ ವಿವಿಧೆಡೆ ಅನ್ನದಾಸೋಹಕ್ಕಾಗಿ ಟೆಂಟ್ ಹಾಕಲಾಗಿದ್ದು, ಆಹಾರ ಪದಾರ್ಥಗಳನ್ನು ತರಿಸಿಕೊಂಡು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ, ಉಚಿತ ಆಟೊ ಸೇವೆ, ಅನಾಥಾಶ್ರಮ, ವೃದ್ಧಾಶ್ರಮ, ಆಸ್ಪತ್ರೆಗಳಲ್ಲಿ ಹಣ್ಣು–ಹಂಪಲು ವಿತರಣೆಯಂತಹ ಪರೋಪಕಾರ್ಯಗಳಿಗೆ ಸನ್ನದ್ಧು ಮಾಡಿಕೊಳ್ಳಲಾಗಿದೆ.

ನಾನಾ ರಾಜಕೀಯ ಪಕ್ಷಗಳ ಕಚೇರಿ, ಶಿಕ್ಷಣ ಸಂಸ್ಥೆಗಳು, ಸಂಘಟನೆಗಳು, ಸರ್ಕಾರಿ ಕಚೇರಿಗಳಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಇರಿಸಿ ಪೂಜೆ ಸಲ್ಲಿಸಲಾಗುತ್ತದೆ. ಇಡೀ ದಿನ ಅಂಬೇಡ್ಕರ್ ಅವರ ಸಾಧನೆ, ಕೊಡುಗೆ, ವ್ಯಕ್ತಿತ್ವದ ಗುಣಗಾನ ನಡೆಯಲಿದೆ.

ಜಿಲ್ಲಾಡಳಿತದಿಂದ ಆಚರಣೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಅಂಬೇಡ್ಕರ್ ಜಯಂತ್ಯುತ್ಸವ ಸಮಿತಿ ಆಶ್ರಯದಲ್ಲಿ ಅಂಬೇಡ್ಕರ್ ಅವರ ಜಯಂತಿ ಆಚರಿಸಲಾಗುವುದು. ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ, ವೇದಿಕೆ ಕಾರ್ಯಕ್ರಮಗಳೂ ಜರುಗಲಿವೆ. ಸಚಿವರು, ಶಾಸಕರು ಸೇರಿದಂತೆ ಅಧಿಕಾರಿಗಳು ಪಾಲ್ಗೊಳ್ಳುವರು.

ಜಿಲ್ಲಾಡಳಿತ ಭವನ ಆಡಿಟೋರಿಯಂ ಸಭಾಂಗಣದಲ್ಲಿ ಬೆಳಿಗ್ಗೆ 11ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಹಾಗೂ ಪುಷ್ಪಾರ್ಚನೆ ಸಲ್ಲಿಸಿ, ಕಾರ್ಯಕ್ರಮ ಉದ್ಘಾಟಿಸುವರು.

ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅಧ್ಯಕ್ಷತೆ ವಹಿಸಲಿದ್ದು, ಸಂಸದರು, ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು ಸೇರಿದಂತೆ ಅಧಿಕಾರಿಗಳ ವರ್ಗ ಪಾಲ್ಗೊಳ್ಳುವುದು. ಆಳಂದ ಬಿಆರ್ಸಿ ಕಾರ್ಯಾಲಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಚಂದ್ರಶೇಖರ್ ಎಸ್.ಕಟ್ಟಿಮನಿ ಹಾಗೂ ಯಾದಗಿರಿ ಜಯಂತ್ಯುತ್ಸವ ಸಮಿತಿಯ ಅಧ್ಯಕ್ಷ ಪರಶುರಾಮ್ ಒಡೆಯರ್ ವಿಶೇಷ ಉಪನ್ಯಾಸ ನೀಡುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-30-172556619

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.