ಯಾದಗಿರಿ: ‘ಅತ್ಯುತ್ತಮವಾದ ಸಂವಿ ಧಾನ ರಚಿಸಿ ಎಲ್ಲರಿಗೂ ಸಮಾನ ಹಕ್ಕುಗಳನ್ನು ತಂದುಕೊಟ್ಟ ಬಾಬಾ ಸಾಹೇಬ ಡಾ.ಬಿ.ಆರ್. ಅಂಬೇಡ್ಕರ್ ಅವರು ಆಧುನಿಕ ಭಾರತದ ಪಿತಾಮಹ’ ಎಂದು ಬಸವಕಲ್ಯಾಣದ ಬಸವ ಮಹಾಮನೆ ಟ್ರಸ್ಟ್ ಅಧ್ಯಕ್ಷ ಸಿದ್ದರಾಮ ಬೆಲ್ದಾಳ ಶರಣರು ಹೇಳಿದರು.

ಇಲ್ಲಿನ ಅಂಬೇಡ್ಕರ್ ನಗರದಲ್ಲಿ ಮಂಗಳವಾರ ರಾತ್ರಿ ಅಂಬೇಡ್ಕರ್ ಜಯಂತ್ಯುತ್ಸವ ಸಮಿತಿಯು ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಆಯೋಜಿಸಿದ್ದ ಬಹಿರಂಗ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ದಕ್ಷಿಣ ಆಫ್ರಿಕಾದ ನೆಲ್ಸನ್ ಮಂಡೆಲಾ, ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರಂತಹ ಜಗತ್ತಿನ ನಾಯಕರು ಅಂಬೇಡ್ಕರ್ ಅವರ ವ್ಯಕ್ತಿತ್ವವನ್ನು ಕೊಂಡಾಡಿದ್ದಾರೆ. ಒಮಾಮ, ಅಂಬೇಡ್ಕರ್ ಅವರನ್ನು ಆಧುನಿಕ ಭಾರತದ ಪ್ರಗತಿಯ ಮಹಾನ್ ನಾಯಕ ಎಂದು ಬಣ್ಣಿಸಿ ಮೆಚ್ಚಿಕೊಂಡಿದ್ದಾರೆ’ ಎಂದರು.

‘ಅಂಬೇಡ್ಕರ್ ಅವರು ಒಂದು ಸಮುದಾಯದ ನಾಯಕರಲ್ಲ, ಇಡೀ ದೇಶದ ನಾಯಕರು. ಜಾತಿ, ಮತ, ಧರ್ಮವನ್ನು ಬದಿಗಿಟ್ಟು ಎಲ್ಲರೂ ಅವರ ಸ್ಮರಣೆ ಮಾಡಬೇಕು. ಅಂಬೇಡ್ಕರ್ ಅವರ ಆಶಯಗಳನ್ನು ಪಾಲಿಸಿ ಸಮಾನತೆ, ನ್ಯಾಯ ಮತ್ತು ಶಿಕ್ಷಣದ ಮಾರ್ಗದಲ್ಲಿ ನಡೆಯಬೇಕು’ ಎಂದು ಸಲಹೆ ನೀಡಿದರು.

‘ಅಂಬೇಡ್ಕರ್ ಅವರು ಪ್ರಪಂಚದಲ್ಲಿ ಗೌರವಾನ್ವಿತರು ಎಂಬುದನ್ನು ಸಂವಿಧಾನದಲ್ಲಿ ಆಶಯಗಳು ಸಾರುತ್ತವೆ. ಸಂವಿಧಾನದಡಿ ಎಲ್ಲರಿಗೂ ಸಮಾನ ಹಕ್ಕು, ಆಡಳಿತ, ರಾಜಕೀಯ ಸ್ಥಾನಗಳನ್ನು ಕೊಟ್ಟಿದ್ದಾರೆ. ಅದರಿಂದ ಕೆಲವರಿಗೆ ನೋವಾಗಿ ಮನುಸ್ಮೃತಿಪರ ಧ್ವನಿ ಎತ್ತುತ್ತಿದ್ದಾರೆ’ ಎಂದರು.

ಗುರುಮಠಕಲ್ ಖಾಸಾಮಠದ ಗುರುಶಾಂತವೀರ ಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿ, ‘ಅಂಬೇಡ್ಕರ್ ಅವರ ತತ್ವಗಳು ಇಂದಿನ ಪೀಳಿಗೆಗೆ ಮಾರ್ಗದರ್ಶಕವಾಗಿವೆ. ಅವರು ಪಡೆದ ಶಿಕ್ಷಣ ಮತ್ತು ಜ್ಞಾನ ನಮ್ಮೆಲ್ಲರಿಗೂ ಪ್ರೇರಣೆಯಾಗಿದ್ದು, ಯುವಕರು ಅಂಬೇಡ್ಕರ್ ಅವರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.

ಮುಖ್ಯ ಭಾಷಣಕಾರ್ತಿಯಾಗಿ ಆಗಮಿಸಿದ್ದ ಮಧು ಹೊಲೆಯರ್ ಅವರು ಮಾತನಾಡಿ, ‘ಮಹಿಳೆಯರು ಡಾ.ಬಿ,ಆರ್.ಅಂಬೇಡ್ಕರ್ ಅವರನ್ನು ಸದಾ ಗೌರವಿಸಿ ಸ್ಮರಿಸಬೇಕು. ಅಂಬೇಡ್ಕರ್ ಅವರು ಮಹಿಳೆಯರಿಗೆ ಎಲ್ಲ ಕ್ಷೇತ್ರಗಳಲ್ಲಿ ಹಕ್ಕುಗಳು ಹಾಗೂ ಅವಕಾಶಗಳನ್ನು ಕಲ್ಪಿಸಲು ಮಹತ್ವದ ಪಾತ್ರ ವಹಿಸಿದ್ದಾರೆ’ ಎಂದರು

ಸಮಿತಿಯ ಅಧ್ಯಕ್ಷ ಪರಶುರಾಮ ಒಡೆಯರ್ ಅಧ್ಯಕ್ಷತೆ ವಹಿಸಿದ್ದರು. ‘ಯುಡಾ’ ಅಧ್ಯಕ್ಷ ಬಾಬುರಾವ್ ಕಾಡ್ಲೂರ್, ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಭೀಮಣ್ಣ ಮೇಟಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶರೆಡ್ಡಿ ಮುದ್ನಾಳ, ಬಿಜೆಪಿ ಮುಖಂಡ ರಾಚನಗೌಡ ಮುದ್ನಾಳ, ದಲಿತ ಮುಖಂಡರಾದ ಖಂಡಪ್ಪ ದಾಸನಕೇರಿ, ಮಲ್ಲಣ್ಣ ದಾಸನಕೇರಿ, ಮರೆಪ್ಪ ಚಟ್ಟೆರಕರ್, ವೀರಭದ್ರಪ್ಪ ಯಡ್ಡಳ್ಳಿ, ಮಲ್ಲಿಕಾರ್ಜುನ ಈಟೆ, ಕಾಶೀನಾಥ್ ನಾಟೇಕಾರ್, ಅರುಣ್ ಕುಮಾರ್ ದಾಸನಕೇರಿ, ಬಸಲಿಗಂಪ್ಪ ಕುರಕುಂಬಳಕರ್, ಭಗವಂತ ಅನ್ವಾರ್, ಶರಣು ನಾಟೇಕಾರ್, ಸೇರಿ ಹಲವು ಉಪಸ್ಥಿತರಿದ್ದರು.

ವಸಂತ ಸುಂಗಲಕರ್ ಸ್ವಾಗತಿಸಿದರು. ಸಂಪತ್ ಚಿನ್ನಾಕರ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-30-224426935

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.