ಯಾದಗಿರಿ: ನಗರದ ಕಸಬ್ವಾಡಿ ಬಡಾವಣೆಯಲ್ಲಿ ಜಾನುವಾರುಗಳನ್ನು ವಧೆ ಮಾಡಿ ಅಕ್ರಮವಾಗಿ ಮಾಂಸ ಮಾರುವ ಅಡ್ಡೆ ಮೇಲೆ ಸೋಮವಾರ ದಾಳಿ ನಡೆಸಿದ ಯಾದಗಿರಿ ನಗರ ಠಾಣೆಯ ಪೊಲೀಸರು, ವಧೆ ಮಾಡುವ ಉದ್ದೇಶದಿಂದ ಸ್ಥಳದಲ್ಲಿ ಕಟ್ಟಿ ಹಾಕಿದ್ದ 18 ಜಾನುವಾರುಗಳನ್ನು ರಕ್ಷಿಸಿದ್ದಾರೆ.

ಕಸಬ್ವಾಡಿ ಬಡಾವಣೆಯ ಸಮೀಪದ ಖಾಲಿ ಜಾಗದಲ್ಲಿ ಜಾನುವಾರುಗಳನ್ನು ತೆಗೆದುಕೊಂಡು ಬಂದು, ಅವುಗಳನ್ನು ಕೂಡಿ ಹಾಕಿ ವಧೆ ಮಾಡಿ ಮಾಂಸ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದಿತ್ತು. ಅದನ್ನು ಆಧರಿಸಿ ನಗರ ಠಾಣೆಯ ಪಿಎಸ್ಐ ಮಂಜನಗೌಡ, ನಗರಸಭೆ ಹಾಗೂ ಪಶು ವೈದ್ಯಕೀಯ ಇಲಾಖೆಯ ಅಧಿಕಾರಿಗಳ ತಂಡ ದಾಳಿ ಮಾಡಿತು.

‘ಅಕ್ರಮವಾಗಿ ವಧೆ ಮಾಡಲು ಕಟ್ಟಿ ಹಾಕಿದ್ದ 18 ಜಾನುವಾರುಗಳು ಸ್ಥಳದಲ್ಲಿ ಪತ್ತೆಯಾಗಿವೆ. ಅವುಗಳಲ್ಲಿ 14 ಎತ್ತುಗಳು, ಒಂದು ಎಮ್ಮೆ ಹಾಗೂ ಮೂರು ಕರುಗಳು ಇದ್ದವು. ಜಾನುವಾರುಗಳನ್ನು ವಧೆ ಮಾಡಿ, ಅವುಗಳ ಕೊಂಬುಗಳು, ಇತರೆ ಭಾಗಗಳು ಸಹ ಪತ್ತೆಯಾಗಿವೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಸಂಬಂಧ ಮೊಹಮ್ಮದ್ ಜಾಕೀರ್, ನೂರ್ ಅಹಮದ್, ಮಹಿಬೂಬ್ ಸಾಬ್, ಅಕ್ರಂ ಹಾಗೂ ಸಾದೀಕ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಲಾಗುತ್ತಿದೆ.

ಆರೋಪಿಗಳ ವಿರುದ್ಧ 2020ರ ಕರ್ನಾಟಕ ಜಾನುವಾರು ಹತ್ಯೆ ತಡೆ ಮತ್ತು ಸಂರಕ್ಷಣಾ ಕಾಯ್ದೆಯ ಸೆಕ್ಷನ್ 4 ( ಜಾನುವಾರು ಹತ್ಯೆ) ಹಾಗೂ ಸೆಕ್ಷನ್ 12 ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-30-425812719

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.