ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ | ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಮನವಿಪತ್ರ ಸಲ್ಲಿಕೆ
Last Updated 30 ಜೂನ್ 2020, 16:21 IST
ಅಕ್ಷರ ಗಾತ್ರ

ಯಾದಗಿರಿ: ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯಾದ್ಯಂತ ಮಂಗಳವಾರ ಪ್ರತಿಭಟನೆ ನಡೆಯಿತು.ತಾಲ್ಲೂಕಿನಲ್ಲಿ ಆಯಾ ತಹಶೀಲ್ದಾರ್‌ ಕಚೇರಿ, ಯಾದಗಿರಿಯಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಈಗ ಇರುವ ಪ್ರೋತ್ಸಾಹಧನ ಮತ್ತು ಗೌರವಧನ ಎರಡನ್ನು ಒಟ್ಟಿಗೆ ಸೇರಿಸಿ ಮಾಸಿಕ ₹12,000 ಗೌರವಧನ ನಿಗದಿಪಡಿಸಬೇಕು. ಕಾರ್ಯಕರ್ತೆಯರ ಆರೋಗ್ಯ ತಪಾಸಣೆ ಮಾಡಬೇಕು. ಪಾಸಿಟಿವ್ ಬಂದಿರುವ ಎಲ್ಲರಿಗೂ ಸಂಪೂರ್ಣ ಉಚಿತ ಚಿಕಿತ್ಸೆ ನೀಡಬೇಕು ಮತ್ತು ಚಿಕಿತ್ಸೆ ಅವಧಿಯಲ್ಲಿ ಸಂಪೂರ್ಣ ಗೌರವಧನ ನೀಡಬೇಕು. ಮಾಸ್ಕ್, ಹ್ಯಾಂಡ್‌ ಗ್ಲೌಸ್, ಫೇಸ್‍ಶೀಲ್ಡ್ ಮತ್ತು ಸ್ಯಾನಿಟೈಸರ್ ಇತ್ಯಾದಿ ಸಮರ್ಪಕವಾಗಿ ನೀಡಬೇಕು ಎಂದು ಆಗ್ರಹಿಸಿದರು.

ಈ ವೇಳೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಅಧ್ಯಕ್ಷೆ ಡಿ.ಉಮಾದೇವಿ ಮಾತನಾಡಿ, ‘ಆಶಾಕಾರ್ಯಕರ್ತೆಯರ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕಳೆದ ಜನವರಿಯಿಂದ ಇಲ್ಲಿಯವರೆಗೆ 13 ಮನವಿ ಪತ್ರಗಳನ್ನು ಸರ್ಕಾರ ಮತ್ತು ಇಲಾಖೆಗೆ ಸಲ್ಲಿಸಲಾಗಿದೆ. ಆದರೂ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ವಿವಿಧ ಆರೋಗ್ಯ ಕಾರ್ಯಕ್ರಮಗಳಲ್ಲಿ ಕೆಲಸಗಳನ್ನು ಮಾಡುತ್ತಿದ್ದಾರೆ‌. ಪ್ರೋತ್ಸಾಹಧನ ಮತ್ತು ಗೌರವಧನ ಎರಡು ರೀತಿಯ ಮಿಶ್ರಣದ ವಿಚಿತ್ರ ವೇತನ ಮಾದರಿಯಲ್ಲಿ ಅವರಿಗೆ ಹಣವನ್ನು ಪಾವತಿಸಲಾಗುತ್ತಿದೆ. ರಾಜ್ಯದಲ್ಲಿ ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಬಿಡಿಬಿಡಿಯಾಗಿ ₹8,000-9,000 ಗೌರವಧನ ನೀಡಲು ಇಲಾಖೆಯಲ್ಲಿ ಬಜೆಟ್ ಅನುದಾನ ನಿಗದಿಮಾಡಲಾಗಿದೆ ಎಂದರು.

ಪ್ರೋತ್ಸಾಹಧನದ ವಿವಿಧ ಕೆಲಸಗಳ ಹಣವನ್ನು ಮತ್ತು ಗೌರವಧನ ಹಣವನ್ನು ಬಿಡಿಬಿಡಿಯಾಗಿ ನೀಡಲಾಗುತ್ತದೆ. ಇದಕ್ಕಾಗಿ ವೆಬ್‌ ಪೋರ್ಟ್‌ ಮಾಡಲಾಗಿದೆ. ಎಲ್ಲಾ ಚಟುವಟಿಕೆಗಳನ್ನು ಬಿಡಿಬಿಡಿಯಾಗಿ ಎಂಟ್ರಿ ಮಾಡಬೇಕಾಗಿರುವುದರಿಂದ ಈ ಹಣ ಸರಿಯಾಗಿ ಕಾರ್ಯಕರ್ತೆಯರಿಗೆ ತಲುಪುತ್ತಿಲ್ಲ. ಈ ಬಗ್ಗೆ ಹಲವಾರು ಬಾರಿ ಇಲಾಖೆಯ ಗಮನಕ್ಕೆ ತರಲಾಗಿದೆ. ಇದು ಬಹುದೊಡ್ಡಸಮಸ್ಯೆಯಾಗಿದೆ. ಆದ್ದರಿಂದ ಪ್ರೋತ್ಸಾಹಧನ ಮತ್ತು ಗೌರವಧನ ಎರಡನ್ನೂ ಒಟ್ಟಿಗೆಸೇರಿಸಿ ಮಾಸಿಕ ಒಂದೇ ನಿಶ್ಚಿತ ಗೌರವಧನ ₹12,000 ಪ್ರತಿ ತಿಂಗಳು ನೀಡಬೇಕು. ಬೇಡಿಕೆ ಈಡೇರದಿದ್ದರೆ ಜುಲೈ 10ರಿಂದ ಕೆಲಸ ಸ್ಥಗಿತಗೊಳಿಸಿ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಜಿಲ್ಲಾ ಮುಖಂಡ ರಾಮಲಿಂಗಪ್ಪ ಬಿ.ಎನ್‌, ಮುನಿಯಮ್ಮ, ಶೋಭಾ, ಶಾರದಾ, ಸುಭದ್ರಮ್ಮ, ರೇಣುಕಾ, ಲಲಿತಾ, ಸುಜಾತಾ, ಸಾವಿತ್ರಮ್ಮ, ಕಾಶಮ್ಮ, ಚಂದ್ರಕಲಾ ಸೇರಿದಂತೆ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT