ಯಾದಗಿರಿ: ಬಾಕಿ ಉಳಿಸಿಕೊಂಡಿರುವ ಆಶಾ ಕಾರ್ಯಕರ್ತೆಯರ ವಿವಿಧ ಬಗೆಯ ಪ್ರೋತ್ಸಾಹ ಧನ ಬಿಡುಗಡೆ ಮಾಡುವಂತೆ ಎಐಯುಟಿಯುಸಿ ಸಂಯೋಜಿತ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಮುಖಂಡರು ಜಿಲ್ಲಾ ಪಂಚಾಯಿತಿ ಸಿಇಒ ಲವೀಶ್ ಒರಡಿಯಾ ಅವರಿಗೆ ಸೋಮವಾರ ಮನವಿ ಪತ್ರ ಸಲ್ಲಿಸಿದರು.

ಮೂರು ತಿಂಗಳಿಂದ ಕೇಂದ್ರ ಸರ್ಕಾರದ ಮಾಸಿಕ ನಿಶ್ಚಿತ ಗೌರವಧನ ಹಾಗೂ ರಾಜ್ಯ ಸರ್ಕಾರದ ನಿಶ್ಚಿತ ಗೌರವ ಧನ ಬಾಕಿ ಇದೆ. ಕಳೆದ ಮೂರು ವರ್ಷಗಳಿಂದ ಟಿಬಿ ರೋಗಿಗಳ ಚಿಕಿತ್ಸೆಯ ಪ್ರೋತ್ಸಾಹ ಧನ ಪಾವತಿಯಾಗಿಲ್ಲ. ನಿವೃತ್ತ ಮತ್ತು ಕೆಲಸ ಬಿಟ್ಟ ಕಾರ್ಯಕರ್ತೆಯರಿಗೂ ನಿವೃತ್ತಿ ಪರಿಹಾರ ಹಣವೂ ಕೊಟ್ಟಿಲ್ಲ ಎಂದು ಹೇಳಿದ್ದಾರೆ.

ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳ ಪ್ರೋತ್ಸಾಹ ಮತ್ತು ಗೌರವ ಧನ ನೀಡಬೇಕು. ಒಂದು ತಿಂಗಳಲ್ಲಿ ಮಾಡಿದ ಎಲ್ಲಾ ಚಟುವಟಿಕೆಗಳಿಗೆ ಪ್ರೋತ್ಸಾಹ ಧನ ಪಾವತಿಸಬೇಕು. ವಿವಿಧ ಆಶಾ ಸೇವೆಗಳನ್ನು ಆಶಾ ನಿಧಿ ತಂತ್ರಾಂಶದಲ್ಲಿ ನಿಷ್ಕ್ರಿಯೆಗೊಳಿಸಿರುವುದನ್ನು ಕೈ ಬಿಟ್ಟು ಈ ಸೇವೆಗಳನ್ನು ಮುಂದುವರೆಸಬೇಕು ಎಂದು ಕೋರಿದ್ದಾರೆ.

ಗ್ಯಾರಂಟಿ ಸರ್ವೆಗಾಗಿ ಆಶಾ ಕಾರ್ಯಕರ್ತೆಯರಿಗೆ ನಿಗದಿ ಮಾಡಿದ್ದ ₹1 ಸಾವಿರ ಬಿಡುಗಡೆ ಮಾಡಬೇಕು. ನಿವೃತ್ತರ ಇಡಿಗಂಟು ಪಾವತಿ ಮಾಡಬೇಕು. ಸಮಸ್ತ ಆ್ಯಪ್ ಮೂಲಕ ದಾಖಲಾತಿ ಮಾಡಿಸುವುದನ್ನು ಕೈಬಿಡಬೇಕು. ಮೌಲ್ಯಮಾಪನ ಹೆಸರಲ್ಲಿ ಆಶಾಗಳಿಗೆ ಆಗುತ್ತಿರುವ ಶೋಷಣೆ ನಿಲ್ಲಿಸಬೇಕು. ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು ಎಂದು ಮನವಿ ಮಾಡಿದ್ದಾರೆ.

ಬೇಡಿಕೆಗಳ ಕುರಿತು ಆರೋಗ್ಯ ಇಲಾಖೆ ಉನ್ನತ ಅಧಿಕಾರಿಗಳಿಗೆ ಪತ್ರ ಬರೆಯುವುದಾಗಿ ಸಿಇಒ ಸಂಘದ ನಿಯೋಗಕ್ಕೆ ಭರವಸೆ ನೀಡಿದರು.

ಸಂಘದ ರಾಜ್ಯ ಅಧ್ಯಕ್ಷ ಕೆ. ಸೋಮಶೇಖರ್, ಜಿಲ್ಲಾ ಅಧ್ಯಕ್ಷೆ ಡಿ. ಉಮಾದೇವಿ, ಮುಖಂಡರಾದ ಪುಷ್ಪಲತಾ, ಚಾಂದ್ ಬಿ, ದಾನಮ್ಮ, ಶಾರದಾ, ಇಂದ್ರಮ್ಮ, ಚಂದ್ರಕಲಾ, ಗಂಗಿಮಾಳಮ್ಮ, ಸಂಪತ್ ಕುಮಾರಿ, ರೇಣುಕಾ, ಶಾಂತ, ಲಕ್ಷ್ಮಿ, ವಿಜಯಲಕ್ಷ್ಮಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-30-1411601199

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.