ಯಾದಗಿರಿ: ‘ಕಾಯಕವೇ ಕೈಲಾಸ ಎಂದು ವಿಶ್ವಕ್ಕೆ ಸಾರುವುದರ ಜೊತೆಗೆ ಸಮಾನತೆಗಾಗಿ ಹೋರಾಡಿದ ಮಹಾನ್ ಕ್ರಾಂತಿ ಪುರುಷ ಬಸವಣ್ಣ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಟಿ.ಎನ್. ಭೀಮುನಾಯಕ ಹೇಳಿದರು.

ನಗರದ ಕರವೇ ಕಾರ್ಯಾಲಯದಲ್ಲಿ ಬಸವಣ್ಣ ಜಯಂತಿ ಆಚರಿಸಿ ಮಾತನಾಡಿದ ಅವರು, ‘ಬಸವಣ್ಣನವರು ಸಮಗ್ರ ಕ್ರಾಂತಿಯ ಯುಗಪುರುಷ. ಕನ್ನಡ ಭಾಷೆಯಲ್ಲಿ ವಚನಗಳನ್ನು ರಚಿಸಿ ಸಮಾಜದ ಅಂಕುಡೊಂಕುಗಳನ್ನು ತಿದ್ದಿದರು. ಕೇವಲ ವಚನಕಾರರಲ್ಲದೆ ಶ್ರೇಷ್ಠ ಆರ್ಥಿಕ ತಜ್ಞರು, ವಿಚಾರವಾಧಿ ಹಾಗೂ ಸಮಾನತಾವಾದಿ ಆಗಿದ್ದರು’ ಎಂದು ಹೇಳಿದರು.

‘ಬಸವಣ್ಣರು 12ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಮುಂಚೂಣಿಯಾಗಿದ್ದು, ಸಮಾನತೆ, ಶ್ರಮದ ಗೌರವ, ಮತ್ತು ಭಕ್ತಿಯ ಮೂಲಕ ಜೀವನವನ್ನು ಉನ್ನತ ಮಟ್ಟಕ್ಕೆ ತರುವ ಸಂದೇಶವನ್ನು ನೀಡಿದ್ದಾರೆ. ಅವರ ವಚನ ಸಾಹಿತ್ಯ ಇಂದಿಗೂ ಮಾನವೀಯ ಮೌಲ್ಯಗಳನ್ನು ಸಾರುತ್ತಿದೆ’ ಎಂದರು.

ಮುಖಂಡರಾದ ಮಲ್ಲು ಮಾಳಿಕೇರಿ, ಸಂತೋಷಕುಮಾರ ನಿರ್ಮಲಕರ್, ವಿಶ್ವರಾಜ ಪಾಟೀಲ, ಅಶೋಕನಾಯಕ, ರವಿ ಜಮ್ಮಾರ್, ಚೇತನ ಮಡಿವಾಳ, ಶರಣು ಹಬ್ಬಳ್ಳಿ, ನಾಗರಾಜ ಪಿಲ್ಲಿ, ವಿಶ್ವ ಯಾದಗಿರಿ, ರಮೇಶ.ಡಿ.ನಾಯಕ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-30-1727204667

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.