ಯಾದಗಿರಿ: ‘ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಮೂರು ವರ್ಷಗಳನ್ನು ಪೂರೈಸಿರುವ ಕಾಂಗ್ರೆಸ್ ಸರ್ಕಾರವು ಭ್ರಷ್ಟಾಚಾರ, ದಲಿತರಿಗೆ ಮೀಸಲಿಟ್ಟ ಹಣದಲ್ಲಿ ಲೂಟಿ, ವರ್ಗಾವಣೆ ದಂಧೆ, ಗುತ್ತಿಗೆದಾರರ ಕಮಿಷನ್ ಹಾವಳಿ, ನಕಲಿ ಸೈಟ್ ಹಂಚಿಕೆಯಲ್ಲಿ ಮುಳುಗಿರುವುದೆ ಸರ್ಕಾರದ ಸಾಧನೆಯಾಗಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ವಿಭೂತಿಹಳ್ಳಿ ಆರೋಪಿಸಿದರು.

‘ಆಡಳಿತ ವೈಫಲ್ಯವೇ ಸಿಎಂ ಸಿದ್ದರಾಮಯ್ಯ ಸರ್ಕಾರದ ಮೂರು ವರ್ಷದ ನಿಜವಾದ ಸಾಧನೆಯಾಗಿದ್ದು, ಅಭಿವೃದ್ಧಿ ವಿಚಾರದಲ್ಲಿ ಹಿಂದೆ ಬಿದ್ದಿದ್ದಾರೆ. ತುಮಕೂರಿನಲ್ಲಿ ಸಾಧನಾ ಸಮಾವೇಶ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದರು.

‘ರಾಜ್ಯದಲ್ಲಿ ಸಾಲದ ಪ್ರಮಾಣ ₹5.18 ಲಕ್ಷ ಕೋಟಿಯಿಂದ ₹7.64 ಲಕ್ಷ ಕೋಟಿಗೆ ಏರಿಕೆಯಾಗಿದೆ. ವಿತ್ತೀಯ ಕೊರತೆಯ ಮಿತಿಯೂ ಉಲ್ಲಂಘನೆಯಾಗಿದೆ. ಬಂಡವಾಳ ವೆಚ್ಚ ಕುಸಿದು, ಗ್ಯಾರಂಟಿಗಳಿಂದಾಗಿ ಇಲಾಖೆಗಳು ದಿವಾಳಿಯಾಗಿವೆ. ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯಲ್ಲಿ ಕಡಿತ ಮಾಡಲಾಗಿದೆ’ ಎಂದರು.

‘ಇಂಧನ, ಮೋಟಾರು ವಾಹನ, ಆಸ್ತಿ ನೋಂದಣಿ, ಮುದ್ರಾಂಕ ಶುಲ್ಕವನ್ನು ಹೆಚ್ಚಳ ಮಾಡಿ ಜನಸಾಮಾನ್ಯರ ಮೇಲೆ ಹೊರೆ ಹಾಕಲಾಗಿದೆ. ಆದಾಯ ಸೋರಿಕೆ ಮತ್ತು ಅನಿರೀಕ್ಷಿತ ವೆಚ್ಚಗಳನ್ನು ತಡೆಯುವಲ್ಲಿ ವಿಫಲವಾಗಿದೆ. ಜೊತೆಗೆ ಆರ್ಥಿಕ ಇಲಾಖೆಯಲ್ಲಿನ ಕಡತಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿದೆ’ ಎಂದು ಹೇಳಿದರು.

‘ಮುಡಾ ನಿವೇಶನ ಹಗರಣ, ವಾಲ್ಮೀಕಿ ನಿಗಮದಲ್ಲಿ ದಲಿತರ ಹಣ ಲೂಟಿ ಹಾಗೂ ಸಚಿವರ ಬಂಧನ, ಅಬಕಾರಿ ಇಲಾಖೆಯಲ್ಲಿ ₹700 ಕೋಟಿ ಲಂಚಕ್ಕೆ ಬೇಡಿಕೆ, ಕಾರ್ಮಿಕ ಇಲಾಖೆಯಲ್ಲಿನ ಕಿಟ್ ಹಗರಣ, ಬಿಡಿಎ ಕಾರ್ನರ್ ಸೈಟ್ ನಕಲಿ ಹಂಚಿಕೆ, ಭೋವಿ ಅಭಿವೃದ್ಧಿ ನಿಗಮದಲ್ಲಿ ನಕಲಿ ಸಾಲ, ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಲಂಚ, ಕೆಐಎಡಿಬಿ ಭೂಪರಿಹಾರ ಹಗರಣ ಸೇರಿದಂತೆ ಇತರೆ ಹಗರಣಗಳಲ್ಲಿ ಮುಳುಗಿದೆ’ ಎಂದು ದೂರಿದರು.

‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ನಾಗಮಂಗಲದಲ್ಲಿ ಕೋಮುಗಲಭೆ, ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ, ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ, ಜೈಲಿನಲ್ಲಿ ರೌಡಿಗಳಿಗೆ ರಾಜಾತಿಥ್ಯ, ಪ್ರಧಾನಿ ಭೇಟಿ ವೇಳೆ ಭದ್ರತಾ ಲೋಪ, ನೈತಿಕ ಪೊಲೀಸ್ಗಿರಿ ಹೆಸರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಉದ್ದೇಶಪೂರ್ವಕವಾಗಿ ಪ್ರಕರಣ ದಾಖಲಿಸಲಾಗುತ್ತಿದೆ’ ಎಂದು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿ ಸದಸ್ಯ ಮಹೇಶರೆಡ್ಡಿ ಮುದ್ನಾಳ, ಮುಖಂಡರಾದ ನಾಗರತ್ನ ಕುಪ್ಪಿ, ಡಾ.ಶರಣಭೂಪಾಲ ರೆಡ್ಡಿ, ಪರಶುರಾಮ ಕುರಕುಂದಿ, ಮೇಲಪ್ಪ ಗುಳಗಿ, ತಿರುಪತಿರೆಡ್ಡಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-30-43245691

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.