ಯಾದಗಿರಿ: ‘ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಏಕಾತ್ಮ ಮಾನವತಾವಾದ ಮತ್ತು ಅಂತ್ಯೋದಯದ ಚಿಂತನೆಗಳನ್ನು ಮುಂದಿಟ್ಟುಕೊಂಡು ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಮತ್ತಷ್ಟು ಬಲಿಷ್ಠಗೊಳಿಸುವ ಸಂಕಲ್ಪ ತೊಟ್ಟಿದ್ದೇವೆ’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ ಹೇಳಿದರು.

ನಗರದ ಹೊರವಲಯದ ಖಾಸಗಿ ಹೋಟೆಲ್ನಲ್ಲಿ ಈಚೆಗೆ ಮುಕ್ತಾಯವಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಜಿಲ್ಲಾ ಮಟ್ಟದ ಪ್ರಶಿಕ್ಷಣದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಎರಡು ದಿನಗಳಿಂದ ಪಕ್ಷದ ಸೈದ್ಧಾಂತಿಕ ಹಿನ್ನೆಲೆ, ಸಂಘನಾತ್ಮಕ ಮೌಲ್ಯಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ತಳಮಟ್ಟದ ಜನಸಾಮಾನ್ಯರಿಗೆ ಮುಟ್ಟಿಸುವ ನಿಟ್ಟಿನಲ್ಲಿ ವಿವಿಧ ವೈಚಾರಿಕ ಗೋಷ್ಠಿಗಳನ್ನು ನಡೆಸಲಾಗಿದೆ’ ಎಂದರು.

‘ಶಿಸ್ತು ಮತ್ತು ಬದ್ಧತೆಯಿಂದ ಶಿಬಿರದಲ್ಲಿ ಪಾಲ್ಗೊಂಡು ಪ್ರಶಿಕ್ಷಣ ಪಡೆದ ಕಾರ್ಯಕರ್ತ ಮಹಾಭಿಯಾನ ಯಶಸ್ವಿಗೊಳಿಸಿದ್ದಾರೆ. ಕಾರ್ಯಕರ್ತರಲ್ಲಿ ಹೊಸ ಚೈತನ್ಯ ಹಾಗೂ ಸಕಾರಾತ್ಮಕ ಶಕ್ತಿಯನ್ನು ತುಂಬಲಾಗಿದೆ’ ಎಂದು ಹೇಳಿದರು.

ಬಿಜೆಪಿ ರಾಜ್ಯ ಮಾಧ್ಯಮ ಸಂಚಾಲಕ ಕರಣಾಕರ ಖಾಸಲೆ, ರಾಜ್ಯ ಸಮಿತಿ ಸದಸ್ಯ ವೆಂಕಟಪ್ರಸಾದ ಮಾಲಿಪಾಟಿ, ವಿಭಾಗ ಸಹ ಪ್ರಭಾರಿ ಶರಣಪ್ಪ ತಳವಾರ, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಮಹೇಶರೆಡ್ಡಿ ಮುದ್ನಾಳ, ದೇವದಾಸ ಗುರುಮಠಕಲ್, ಮುಖಂಡರಾದ ನಾಗರತ್ನಾ ಕುಪ್ಪಿ, ದೇವಿಂದ್ರನಾಥ ನಾದ, ಸಿದ್ದಣ್ಣಗೌಡ ಕಾಡಂನೊರ, ಶಿವರಾಜ ದೇಶಮುಖ, ಪರುಶುರಾಮ ಕುರುಕುಂದಿ, ಮಲ್ಲಪ್ಪ ಗುಳಗಿ, ಮೋನೇಶ ಬೇಳಿಗೇರ, ಹಣಮಂತ ಇಟಗಿ ಸೇರಿ ಇತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-30-2007094378

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.