ಯಾದಗಿರಿ: ಸರ್ಕಾರಿ ಅಧಿಕಾರಿಗಳು, ನೌಕರರ ವಿರುದ್ಧ ಗಂಭೀರ ಆರೋಪದ ದೂರು ಸಲ್ಲಿಸಿ ತನಿಖೆ ವೇಳೆ ಸಮರ್ಪಕ ದಾಖಲೆಗಳನ್ನು ಸಲ್ಲಿಸದ ಕೆಲ ಸಂಘಟನೆ ಹಾಗೂ ಮುಖಂಡರ ಹೆಸರುಗಳನ್ನು ಕಪ್ಪು ಪಟ್ಟಿಗೆ ಸೇರಿಸಿ ಜಿಲ್ಲಾ ಪಂಚಾಯಿತಿ ಸಿಇಒ ಲವೀಶ್ ಒರಡಿಯಾ ಆದೇಶಿಸಿದ್ದಾರೆ.

ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ನೀಡಲಾದ ದೂರುಗಳಿಗೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆ, ಪರಿಶೀಲನೆ ವೇಳೆ ದೂರುದಾರರು ಸಮರ್ಪಕ ದಾಖಲೆಗಳನ್ನು ನೀಡಿಲ್ಲ. ಕೆಲವರು ದೂರುಗಳನ್ನು ಹಿಂಪಡೆದು ಸರ್ಕಾರದ ಸಂಪನ್ಮೂಲ ಮತ್ತು ಸಮಯ ವ್ಯರ್ಥಗೊಳಿಸಿದ್ದು, ಆಡಳಿತಾತ್ಮಕ ವೆಚ್ಚ ಭರಿಸುವಂತೆ ಸೂಚಿಸಿ, ಲಿಖಿತ ಸಮಜಾಯಿಷಿ ನೀಡುವಂತೆಯೂ ಸೂಚಿಸಲಾಗಿತ್ತು ಎಂದು ಹೇಳಿದ್ದಾರೆ.

ದೂರುದಾರರು ನೀಡಿದ್ದ ಸಮಜಾಯಿಷಿ ಒಪ್ಪಿತವಾಗಿಲ್ಲ. ಸಾರ್ವಜನಿಕ ದೂರು ವಿಲೇವಾರಿ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಕಾಯ್ದುಕೊಳ್ಳುವ ದೃಷ್ಟಿಯಿಂದ ಕಪ್ಪು ಪಟ್ಟಿಗೆ ಸೇರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಪ್ಪುಪಟ್ಟಿಗೆ ಸೇರಿಸಲಾದ ಸಂಘಟನೆಗಳ ಮುಖಂಡರಿಂದ ಮುಂದಿನ ಒಂದು ವರ್ಷದ ಅವಧಿಗೆ ಯಾವುದೇ ದೂರುಗಳನ್ನು ಸ್ವೀಕರಿಸಲಾಗದು ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-30-816365234

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.