ಶುಕ್ರವಾರ, ಜೂನ್ 5, 2020
27 °C

ಯಾದಗಿರಿ ಅಧ್ಯಕ್ಷ ಸ್ಥಾನ ಎಸ್‌ಸಿ, ಉಪಾಧ್ಯಕ್ಷ ಸ್ಥಾನ ಸಮಾನ್ಯ ಮಹಿಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ನಗರಸಭೆಗಳಿಗೆ ಒಂದೂವರೆ ವರ್ಷದ ನಂತರ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಸರ್ಕಾರ ಮೀಸಲಾತಿ ಪಟ್ಟಿ ಪ್ರಕಟಿಸಿದ್ದು, ಯಾದಗಿರಿ ನಗರಸಭೆ ಅಧ್ಯಕ್ಷ ಸ್ಥಾನ ಎಸ್‌ಸಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.

31 ಸ್ಥಾನಗಳಲ್ಲಿ 16 ಬಿಜೆಪಿ ಸದಸ್ಯರು, ಕಾಂಗ್ರೆಸ್‌ 11 ಸದಸ್ಯರು, ಜೆಡಿಎಸ್‌ ಮೂರು ಸ್ಥಾನ, ಪಕ್ಷೇತರ ಒಂದು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.

ಶಹಾಪುರ ನಗರಸಭೆಯಲ್ಲಿ 31 ಸ್ಥಾನಗಳಿದ್ದು, ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಎಸ್‌ಟಿಗೆ ಮೀಸಲಾಗಿದೆ. ‌16 ಕಾಂಗ್ರೆಸ್‌, 12 ಬಿಜೆಪಿ, 2 ಎಸ್‌ಡಿಪಿಐ 2, ಪಕ್ಷೇತರ 1 ಸ್ಥಾನದಲ್ಲಿ ಗೆಲುವ ಸಾಧಿಸಿದ್ದಾರೆ.

ಸುರಪುರ ನಗರಸಭೆಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯಕ್ಕೆ ಮೀಸಲಾಗಿದೆ. 31 ವಾರ್ಡ್‌ಗಳಲ್ಲಿ 15 ಕಾಂಗ್ರೆಸ್‌, 16 ಬಿಜೆಪಿ ಸ್ಥಾನಗಳಲ್ಲಿ ಜಯಗಳಿಸಿದೆ. ಮೀಸಲಾತಿ ಪಟ್ಟಿ ಪ್ರಕಟವಾಗಿದ್ದು, ರಾಜಕೀಯ ಚಟುವಟಿಕೆಗಳು ಗರಿಗೇದರಲಿವೆ.

ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶದಂತೆ ಸೆಪ್ಟೆಂಬರ್ 5, 2018ರಿಂದ ಯಾದಗಿರಿ ನಗರಸಭೆಯ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು