ಯಾದಗಿರಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಜೂ 12 ರಂದು ಆಚರಿಸಲಾಗುತ್ತಿದ್ದು, ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಸಿದ್ದತೆ ನಡೆಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕೋಲಾರ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಬಾಲ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡ ಸಂಸ್ಥೆಯ ಮುಖ್ಯಸ್ಥರು, ಮಾಲೀಕರ ವಿರುದ್ದ ವಿಳಂಬವಿಲ್ಲದೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಮಾತನಾಡಿ, ‘ಜಿಲ್ಲೆಯಾದ್ಯಂತ ಜೂ 1 ರಿಂದ 31ರ ವರೆಗೆ ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಕ್ರಿಯಾ ಮಾಸ ಅಚರಿಸಲಾಗುತ್ತಿದ್ದು, ನೇಮಿಸಲಾದ ನಿರೀಕ್ಷಕರು ರಕ್ಷಣಾ ಅಭಿಯಾನದಲ್ಲಿ ಭಾಗವಹಿಸುವಂತೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಹರಿ ಆರ್. ದೇಶಪಾಂಡೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ತಿಪ್ಪಣ್ಣ ಶಿರಸಗಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸದಾಶಿವ ಎಂ.ನಾರಾಯಣಕರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಾವಿತ್ರಿ ಗುಗ್ಗರಿ, ಕೆಪಿಟಿಸಿಎಲ್ ಎಇ ಶಂಕರ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ದಿನೇಶಕುಮಾರ, ಸಿ.ಆರ್.ಕಂಬಾರ, ಸುಜಾತ ಆರ್., ಶ್ರೀದೇವಿ ಎಂ.ಬಿರಾದರ್, ನರಸಿಂಗರಾವ ಚೌದರಿ, ಸಂಗೀತಾ ಹೊನ್ನೂರು, ಸಾಬೇರಾ ಬೇಗಂ, ಶಿವಪ್ಪ ಜಮಾದಾರ, ಫಜಲುರ್ ರೆಹಮಾನ್, ಫ್ರಾನ್ಸಿಸ್ ಶಾಬು, ಕೀರ್ತನಾ, ಭಗತ ವಾಡೇಕರ್, ವೆಂಕಟೇಶ ಶಿವಾಂಗೆ, ಬಾಲು ನಾಯಕ, ಅಮೃತರಾವ ಕೋತ್ವಾಲ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-30-746691050

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.