ಯಾದಗಿರಿ: ಇಲ್ಲಿನ ಜಿಲ್ಲಾಡಳಿತ ಭವನದ 20 ಸಿಬ್ಬಂದಿಗೆ ಕೊರೊನಾ ಸೋಂಕು ಪತ್ತೆಯಾಗಿರುವ ಭೀತಿ ಎದುರಾಗಿದ್ದು, ಉನ್ನತ ಅಧಿಕಾರಿಗಳಲ್ಲಿ ಆತಂಕ ಶುರುವಾಗಿದೆ.

ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ ರಜಪೂತ ಸೇರಿದಂತೆ ಜಿಲ್ಲಾಡಳಿತ ಭವನದ ಅಧಿಕಾರಿಗಳು ಹೋಂ ಕ್ವಾರಂಟೈನ್ ಗೆ ಒಳಗಾಗುವ ಸಾಧ್ಯತೆ ಇದೆ.

ಶುಕ್ರವಾರ ಬೆಳಿಗ್ಗೆಯಿಂದಲೇ ಜಿಲ್ಲಾಡಳಿತ ಭವನದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಭವನದ ಎಲ್ಲಾ ಕೊಠಡಿಗಳಿಗೆ ಸ್ಯಾನಿಟೈಸ್ ಸಿಂಪಡಿಸಿದರು. ಉದ್ಯಾನ ವನಗಳಿಗೆ ಕೂಡ ರಾಸಾಯನಿಕ ಸಿಂಪಡಣೆ ಮಾಡಲಾಯಿತು.

ಶುಕ್ರವಾರ ಜಿಲ್ಲಾಡಳಿತ ಭವನಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

ಈ ವೇಳೆ ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಪ್ರಭಾರಿ ಪೌರಾಯುಕ್ತ ಬಕ್ಕಪ್ಪ, ಪರಿಸರ ಅಭಿಯಂತರ ಸಂಗಮೇಶ, ಆರೋಗ್ಯ ನಿರೀಕ್ಷಕಿ ಶರಣಮ್ಮ ಸೇರಿದಂತೆ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.