ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

68 ಜನರಿಗೆ ಕೋವಿಡ್ ದೃಢ

ಜಿಲ್ಲೆಯಲ್ಲಿ ಇಬ್ಬರು ವೃದ್ಧೆಯರ ಸಾವು, ಎರಡಕ್ಕೆರಿದ ಸಾವಿನ ಸಂಖ್ಯೆ
Last Updated 25 ಜುಲೈ 2020, 16:32 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿಶನಿವಾರ 68 ಕೋವಿಡ್‌ ಪ್ರಕರಣಗಳು ದೃಢವಾಗಿದ್ದು, ಸೋಂಕಿತರ ಸಂಖ್ಯೆ 1,932ಕ್ಕೆ ಏರಿಕೆಯಾಗಿದೆ. ಕೋವಿಡ್‌ನಿಂದ ಒಬ್ಬ ವೃದ್ಧೆ ಮೃತಪಟ್ಟಿದ್ದು, ಸಾವಿನ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.ಈ ಹಿಂದೆ ಮೇ 20ರಂದು 54 ವರ್ಷದ ವೃದ್ಧೆ ಆಸ್ಪತ್ರೆಗೆ ಕರೆ ತರುವ ಮುನ್ನವೇ ಸಾವನ್ನಪ್ಪಿದ್ದರು. ಗಂಟಲು ದ್ರವ ತೆಗೆದು ಪರೀಕ್ಷೆ ಮಾಡಿದಾಗ ಕೋವಿಡ್‌ ಇರುವುದು ದೃಢಪಟ್ಟಿತ್ತು.

ಶನಿವಾರ ಮತ್ತೆ 64 ಜನರು ಗುಣಮುಖರಾಗಿದ್ದು, ಇಲ್ಲಿಯವರೆಗೆ 1,576 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 354 ಸಕ್ರಿಯ ಪ್ರಕರಣಗಳಿವೆ.

ಕೋವಿಡ್ ದೃಢಪಟ್ಟವರಲ್ಲಿ ಹಲವರು ಸೋಂಕಿನ ಲಕ್ಷಣಗಳನ್ನು ಹೊಂದಿಲ್ಲ. ಇನ್ನು ಕೆಲವರಿಗೆ ಸೋಂಕು ಹೇಗೆ ಹರಡಿತು ಎನ್ನುವ ಪತ್ತೆ ಕಾರ್ಯದಲ್ಲಿ ಅಧಿಕಾರಿಗಳು ತೊಡಗಿಸಿಕೊಂಡಿದ್ದಾರೆ.

ಸುರಪುರದಲ್ಲಿ 15 ಕೋವಿಡ್ ಪ್ರಕರಣಗಳು ದೃಡಪಟ್ಟಿವೆ.ಇನ್ನುಳಿದಂತೆ ಯಾದಗಿರಿ ತಾಲ್ಲೂಕಿನಲ್ಲಿ ಹೆಚ್ಚು ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.

ಕೊರೊನಾ ವೈರಸ್‍ ಶೀಘ್ರ ಪತ್ತೆ ಹಚ್ಚಲುಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಭಾನುವಾರ ಆ್ಯಂಟಿಜೆನ್ ಟೆಸ್ಟ್ (ಕೋವಿಡ್-19 ಟೆಸ್ಟ್) ಗಳನ್ನು ಮಾಡಲಾಗುತ್ತಿದೆ.ಇದರಿಂದ ಹೆಚ್ಚಿನ ಪ್ರಕರಣಗಳು ಪತ್ತೆಯಾಗುವ ಸಂಭವಿವಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 3,525 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 5,237 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ 156 ಕಂಟೇನ್‍ಮೆಂಟ್ ಝೋನ್‍ಗಳನ್ನು ರಚಿಸಲಾಗಿದ್ದು, ಇದರಲ್ಲಿ 66 ಕಂಟೇನ್‍ಮೆಂಟ್ ಝೋನ್‍ಗಳನ್ನು ತೆರವುಗೊಳಿಸಲಾಗಿದೆ.

ಹೊಸ ಜಿಲ್ಲಾಸ್ಪತ್ರೆಯಲ್ಲಿ 160 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪುರ ಕೊರೊನಾ ಕೇರ್ ಸೆಂಟರ್‌ನಲ್ಲಿ 55 ಜನರನ್ನು, ಸುರಪುರ ಕೊರೊನಾ ಕೇರ್ ಸೆಂಟರ್‌ನಲ್ಲಿ 43 ಜನರನ್ನು ಮತ್ತು ಬಂದಳ್ಳಿ ಏಕಲವ್ಯ ಕೊರೊನಾ ಕೇರ್ ಸೆಂಟರ್‌ನಲ್ಲಿ 98 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ.

ಎರಡು ತಿಂಗಳು ನಂತರ ಮತ್ತೊಂದು ಸಾವು:
ಮೇ 20 ಮಹಾರಾಷ್ಟ್ರದಿಂದ ಬಂದ ವೃದ್ಧೆ ಯರಗೋಳ ಚೆಕ್ ಪೋಸ್ಟ್ ಬಳಿ ಸಾವನ್ನಪ್ಪಿದ್ದರು. ಇದಾದ ನಂತರ ಜುಲೈ 24ರಂದು ಮೃತಪಟ್ಟಿರುವ ವೃದ್ಧೆ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿರುವುದರಿಂದ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದವರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT