ವಡಗೇರಾ: ಮೀನು ಹಿಡಿಯುವ ಬಲೆ ಕಾಲಿಗೆ ಸಿಕ್ಕಿಕೊಂಡ ಕಾರಣ ತಾಲ್ಲೂಕಿನ ಜೋಳದಡಗಿ ಗ್ರಾಮದ ಭೀಮಾ ನದಿಗೆ ಮೀನು ಹಿಡಿಯಲು ಹೋಗಿದ್ದ ಮೀನುಗಾರ ಸಮುದಾಯದ ನಾಗರಾಜ ಹಣಮಂತ (28) ನೀರಿನಲ್ಲಿ ಬಿದ್ದು ಮೃತಪಟ್ಟಿದ್ದಾನೆ.

ಭಾನುವಾರ ಬೆಳಿಗ್ಗೆ 6 ಗಂಟೆಗೆ ಮೂರು ಜನ ಮೀನುಗಾರರು ಮೀನು ಹಿಡಿಯಲು ನದಿಯಲ್ಲಿ ಬಲೆ ಬಿಡುವ ಸಮಯದಲ್ಲಿ ಎಲ್ಲಿಂದಲೋ ಬಂದ ಮೊಸಳೆ ಒಮ್ಮೆಲೇ ಪ್ರತ್ಯಕ್ಷವಾಗಿ ಮೀನಿನ ಬಲೆಯನ್ನು ಜೋರಾಗಿ ಎಳೆದಿದೆ. ಇದರಿಂದ ಬಲೆ ನಾಗರಾಜನ ಮೈಯೆಲ್ಲಾ ಸುತ್ತಿಕೊಂಡು ಈಜಾಡಲು ಬಾರದೆ ಮೃತ ಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಮೃತ ನಾಗರಾಜನ ಮೃತ ದೇಹವನ್ನುನೀರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಯಾದಗಿರಿಗೆ ಕಳುಹಿಸಲಾಗಿದೆ. ಪ್ರಕರಣವನ್ನು ವಡಗೇರಾ ಪೊಲೀಸ್ ಠಾಣೆಯಲ್ಲಿ ದಾಖಲಿಸಿಕೊಂಡು ಪಿಎಸ್ಐ ಮಹೇಬೂಬ್ ಅಲಿ ತನಿಖೆಯನ್ನು ಕೈಗೊಂಡಿದ್ದಾರೆ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-30-591697979

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.