ಯಾದಗಿರಿ: ‘ಕಳೆದ ವಾರದ ಗಾಳಿ ಮತ್ತು ಮಳೆಯಿಂದಾಗಿ ವಡಗೇರಾ ತಾಲ್ಲೂಕಿನ ಚನ್ನೂರು, ಗೊಂದೇನೂರು, ಐಕೂರು, ಕೊಂಕಲ್ ಸೇರಿದಂತೆ ಹಲವು ಗ್ರಾಮಗಳಲ್ಲಿ ಸುಮಾರು 300 ಎಕರೆ ಪ್ರದೇಶದಲ್ಲಿನ ಭತ್ತ, ಜೋಳ, ಸಜ್ಜೆ ಸೇರಿ ಮತ್ತಿರರ ಬೆಳೆಗಳು ಹಾನಿಗೊಳಗಾಗಿವೆ. ಜಿಲ್ಲಾಧಿಕಾರಿಗಳಿಂದ ತುರ್ತು ವರದಿ ಪಡೆದು ರೈತರಿಗೆ ಪರಿಹಾರ ನೀಡಬೇಕು’ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಮನವಿ ಮಾಡಿದರು.

ವಿಧಾನಸಭೆಯ ಬಜೆಟ್ ಅಧಿವೇಶನದ ಶೂನ್ಯ ವೇಳೆಯಲ್ಲಿ ಮಾತನಾಡಿದ ಅವರು, ಪ್ರವಾಹದಿಂದ ಹಾನಿಗೊಳಗಾದ ರೈತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಹೀಗಾಗಿ, ಬೆಳೆ ಕಳೆದುಕೊಂಡ ರೈತರಿಗೆ ಪರಿಹಾರ ಕಲ್ಪಿಸುವಂತೆ ಕಂದಾಯ ಸಚಿವರು ಹಾಗೂ ಸರ್ಕಾರಕ್ಕೆ ಮನವಿ ಮಾಡಿದರು.

‘200 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ₹100 ಕೋಟಿ ಅನುದಾನ ಹಾಗೂ ಒಳಚರಂಡಿ ಯೋಜನೆಗೆ ₹ 287 ಕೋಟಿ ಅನುದಾನ ನೀಡಲಾಗಿದೆ. ದೋರನಹಳ್ಳಿಗೆ ಪಿಯು ಕಾಲೇಜು ಮಂಜೂರಾಗಿದ್ದು, ಹೊಸ ತಾಲ್ಲೂಕಾದ ವಡಗೇರಾಕ್ಕೂ ಪಿಯು ಕಾಲೇಜು ಮಂಜೂರು ಮಾಡಬೇಕು’ ಎಂದರು.

‘ವನಮಾರಪಲ್ಲಿ-ರಾಯಚೂರು ರಾಜ್ಯ ಹೆದ್ದಾರಿಯ ಸುಮಾರು 100 ವರ್ಷಗಳ ಹಳೇ ಸೇತುವೆ ಜೀರ್ಣಾವಸ್ಥೆಯಲ್ಲಿದೆ. ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ₹ 75 ಕೋಟಿ ವೆಚ್ಚದಲ್ಲಿ ಹೊಸ ಸೇತುವೆ ನಿರ್ಮಾಣ ಮಾಡಬೇಕು. ನಗರದಲ್ಲಿ ಪ್ರವಾಸಿಗರಿಗಾಗಿ ವಸತಿ ಸಂಕೀರ್ಣ ಹಾಗೂ ಸರ್ಕಾರಿ ಕಟ್ಟಡಗಳ ಪುನರ್ ನಿರ್ಮಾಣಕ್ಕೆ ಅನುದಾನ ನೀಡಬೇಕು’ ಎಂದು ಕೋರಿದರು.

‘ಹಿರೇಹಾನೂರು ಗ್ರಾಮದ ಬಳಿ ಭೀಮಾ ನದಿಗೆ ನಿರ್ಮಿಸಿರುವ ಬ್ರಿಡ್ಜ್ ಕಂ ಬ್ಯಾರೇಜ್ ಗೇಟ್ಗಳು ಹಾಳಾಗಿ ನೀರು ಸೋರಿಕೆಯಾಗುತ್ತಿದೆ. ₹ 75 ಕೋಟಿ ವೆಚ್ಚದಲ್ಲಿ ಹೊಸ ಮೆಕಾನಿಕಲ್ ವರ್ಟಿಕಲ್ ಗೇಟ್ ಅಳವಡಿಸುವ ಕಾಮಗಾರಿಯನ್ನು ತಕ್ಷಣ ಆರಂಭಿಸಬೇಕು. ನಗರದಲ್ಲಿ ಪ್ರತ್ಯೇಕ ಜೆಸ್ಕಾಂ ಉಪವಿಭಾಗ ಕಚೇರಿ ಸ್ಥಾಪಿಸಬೇಕು. ವಡಗೇರಾದಲ್ಲಿ ಜೆಸ್ಕಾಂ ಉಪವಿಭಾಗ ಮಂಜೂರು ಮಾಡಿ, ಜಿಲ್ಲೆಗೆ ಹೊಸ ಜೆಸ್ಕಾಂ ವೃತ್ತ ಕಚೇರಿ ರಚಿಸಬೇಕು’ ಎಂದರು.

‘ಅರಕಲ್ ಬಂಡ ಹಾಗೂ ಗಡ್ಡೆಸೂಗುರು ಗ್ರಾಮಗಳಲ್ಲಿ ಮಂಜೂರಾದ 110 ಕೆವಿ ವಿದ್ಯುತ್ ಉಪಕೇಂದ್ರ ಕಾಮಗಾರಿ ಆರಂಭಿಸಬೇಕು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನಸಂಖ್ಯೆ ಹೆಚ್ಚಿದ್ದು, ಕಳೆದ ಮೂರು ವರ್ಷಗಳಲ್ಲಿ ವಸತಿ ನಿಲಯ ಮಂಜೂರಾಗಿಲ್ಲ. ಜೊತೆಗೆ ಅಲ್ಪಸಂಖ್ಯಾತರ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹೆಚ್ಚುವರಿ ಅನುದಾನ ನೀಡಬೇಕು’ ಎಂದು ಕೋರಿದರು.

ಯಾದಗಿರಿ ಕ್ಷೇತ್ರದಲ್ಲಿರುವ ಪ್ರಾಚೀನ ದೇವಸ್ಥಾನಗಳ ಅಭಿವೃದ್ಧಿಗೆ ಅನುದಾನ ನೀಡಬೇಕು. ವಡಗೇರಾ ಪಟ್ಟಣದಲ್ಲಿ 50 ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ₹ 20.58 ಕೋಟಿ ಮಂಜೂರು ಮಾಡಬೇಕು. ನಗರದಲ್ಲಿ ಸರ್ಕಾರಿ ಜಿಟಿಟಿಸಿ ಕಾಲೇಜು ಸ್ಥಾಪನೆಗೆ ₹ 73 ಕೋಟಿ ಅನುದಾನ ನೀಡಿ, ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಸದನದಲ್ಲಿ ಮನವಿ ಮಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-30-352562784

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.