ಯಾದಗಿರಿ: ಕರ್ತವ್ಯ ಲೋಪದ ಕಾರಣಕ್ಕೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಸರೋಜಾ ಅವರನ್ನು ಸೇವೆಯಿಂದ ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಉಪ ಲೋಕಾಯುಕ್ತರು ಜಿಲ್ಲೆಗೆ ಭೇಟಿ ನೀಡುವ ಮುನ್ನ ಸಭೆ ನಡೆಸಿದ್ದ ಜಿಲ್ಲಾಧಿಕಾರಿ, ಜಿಲ್ಲೆಯ ವಸತಿ ನಿಲಯಗಳ ಸಮರ್ಪಕ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದರು. ಆದರೆ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಸರೋಜಾ ಯಾವುದೇ ಕ್ರಮ ಕೈಗೊಳ್ಳದೇ ಬೇಜವಾಬ್ದಾರಿತನ ತೋರಿದ್ದರು. ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದರೂ ಇಲ್ಲಿಯವರೆಗೂ ಸಮಜಾಯಿಷಿ ನೀಡಿಲ್ಲ. ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಇಲಾಖೆಯ ಮೇಲಧಿಕಾರಿಗಳಿಗೆ ಶಿಫಾರಸು ಮಾಡಿದ್ದರು.

ಸರೋಜಾ ಅವರು ಕರ್ತವ್ಯ ನಿರ್ವಹಿಸುವಲ್ಲಿ ಬೇಜವಾಬ್ದಾರಿತನ ತೋರಿರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆಯಲ್ಲಿ ಇಲಾಖೆ ವಿಚಾರಣೆ ಕಾಯ್ದಿರಿಸಿ ಅಮಾನತುಗೊಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.