ಯಾದಗಿರಿ: ‘ಆದ್ಯ ವಚನಕಾರ ದೇವರ ದಾಸಿಮಯ್ಯ ಅವರು ತಮ್ಮ ವಚನಗಳ ಮೂಲಕ ಸಮಾಜ ಸುಧಾರಣೆ ಮಾಡಲು ಶ್ರಮಿಸಿದ್ದರು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕೋಲಾರ ಹೇಳಿದರು.

ಇಲ್ಲಿನ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಸುರಪುರ ತಾಲ್ಲೂಕಿನ ಮುದನೂರಿನವರಾದ ದಾಸಿಮಯ್ಯ, ರಾಮನಾಥ ಸ್ವಾಮಿಯ ಆರಾಧಕರು. ರಾಮನಾಥ ಅವರ ಅಂಕಿತನಾಮವಾಗಿತ್ತು. ಅವರ ವಚನಗಳಲ್ಲಿ ನಿಷ್ಠುರವಾದ, ಔಚಿತ್ಯಪೂರ್ಣವಾದ ದೃಷ್ಟಾಂತಗಳಿವೆ. ರಾಮನಾಥ ಎಂಬ ಹೆಸರಲ್ಲಿ 176 ವಚನಗಳನ್ನು ರಚಿಸಿದ್ದಾರೆ’ ಎಂದರು.

‘ದೇವರ ದಾಸಿಮಯ್ಯ ಅವರು ತಮ್ಮ ಆಧ್ಯಾತ್ಮ ಸಿರಿವಂತಿಕೆಯಿಂದ ಮೆರೆದು, ಶಿವನ ಹಾದಿಯಲ್ಲಿ ನಡೆದರು. ದಾಸಿಮಯ್ಯ ಅವರ ವಚನಗಳ ಆಸೆಯದಂತೆ ನಡೆದರೆ ನಮ್ಮ ಬಾಳು ಬೆಳಕಾಗುವುದು’ ಎಂದು ಹೇಳಿದರು.

ಉಪನ್ಯಾಸ ನೀಡಿದ ಉಪನ್ಯಾಸಕಿ ಜಯದೇವಿ ಗಾಯಕವಾಡ, ‘ದೇವರ ದಾಸಿಮಯ್ಯ ಅವರ ಹೆತ್ತವರ ಇಚ್ಛೆಯಂತೆ ಶಿವಪುರದ ದುಗ್ಗಳೆಯನ್ನು ವರಿಸಿದರು. ಆಕೆಯೂ ಮಹಾನ್ ಸಾಧ್ವಿಮಣಿ. ದಂಪತಿಗಳಿಬ್ಬರೂ ಸಜ್ಜನರು, ದೈವಭಕ್ತರು, ಧಾರಾಳತನ ವುಳ್ಳವರಾಗಿದ್ದರು. ಯಾರೇ ಕಷ್ಟದಲ್ಲಿದ್ದರೂ ತಮ್ಮ ಶಕ್ತಿ ಮೀರಿ ಸಹಾಯ ಮಾಡುತ್ತಿದ್ದರು’ ಎಂದರು.

‘ಪ್ರತಿಯೊಬ್ಬರು ಉತ್ತಮ ಸಂಸ್ಕೃತಿ, ಧರ್ಮ, ಆಚಾರವಾಗಿ ನಡೆಯಬೇಕು ಎಂದು ಸಂದೇಶವನ್ನು ತಮ್ಮ ವಚನಗಳ ಮೂಲಕ ತಿಳಿಸಿದ್ದಾರೆ. ದಕ್ಷಿಣ ಭಾರತದಲ್ಲಿ ಹೆಸರಾದ ಶರಣರಿಗಿಂತಲೂ ಮೊಟ್ಟ ಮೊದಲ ವಚನಕಾರ ದೇವರ ದಾಸಿಮಯ್ಯ. ಅವರ ವಚನಗಳು ಅರ್ಥೈಸಿಕೊಳ್ಳಲು ಬಹಳ ಸರಳವಾಗಿದ್ದು, ಸಮಾಜಕ್ಕೆ ಧಾರ್ಮಿಕ ಪ್ರಜ್ಞೆಯ ಸ್ಫೂರ್ತಿಯ ಚಿಲುಮೆಯಾಗಿವೆ’ ಎಂದು ಅಭಿಪ್ರಾಯಪಟ್ಟರು.

‘ಯುಡಾ’ ಅಧ್ಯಕ್ಷ ಬಾಬುರಾವ ಕಾಡ್ಲೂರ್, ದೇವರ ದಾಸಿಮಯ್ಯ ಜಯಂತಿ ಸಮಿತಿ ಗೌರವಾಧ್ಯಕ್ಷ ಬಸವರಾಜ ಹುನಗುಂದ, ಅಧ್ಯಕ್ಷ ವೀರಸಂಗಪ್ಪ ಹಾವೇರಿ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಉಪನಿರ್ದೇಶಕಿ ಉತ್ತರಾದೇವಿ ಮಠಪತಿ ಸೇರಿದಂತೆ ಇತರರು ಭಾಗವಹಿಸಿದ್ದರು.ಬೂದಯ್ಯ ಹಿರೇಮಠ ಪ್ರಾರ್ಥಿಸಿ, ಪರಶುರಾಮ ನಿರೂಪಿಸಿ, ಸ್ವಾಗತಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-30-126308543

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.