ವಡಗೇರಾ: ‘ಯಾದಗಿರಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಯಾವುದೇ ಇಲಾಖೆಯಿಂದ ಕೈಗೊಳ್ಳುವ ಅಭಿವೃದ್ಧಿ ಕಾಮಗಾರಿಗಳನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಪ್ರಾಂಜಲವಾದ ಮನಸ್ಸಿನಿಂದ ಮಾಡಿದಾಗ ಮಾತ್ರ ಅದು ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತದೆ’ ಎಂದು ಶಾಸಕ ಚನ್ನಾರಡ್ಡಿ ಪಾಟೀಲ ತುನ್ನೂರು ಹೇಳಿದರು.

ವಡಗೇರಾ ತಾಲ್ಲೂಕಿನ ಗುರುಸುಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಲೋಕೋಪಯೋಗಿ ಇಲಾಖೆಯಿಂದ ದೇವಸ್ಥಾನದಿಂದ ಮುಖ್ಯರಸ್ತೆಯವರೆಗೆ ₹ 2 ಕೋಟಿ ವೆಚ್ಚದಲ್ಲಿ ಸಿಮೆಂಟ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ನಾನು ಹಂತಹಂತವಾಗಿ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಿ, ನಿಮ್ಮೆಲ್ಲರ ಸಹಕಾರದಿಂದ ಹೊಸ ಕಾಯಕಲ್ಪ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಭರವಸೆ ನೀಡಿದರು.

‘‘ಈಗಾಗಲೇ ನಗರದಲ್ಲಿ ಜನರ ಬೇಡಿಕೆಯಂತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಬರುವ ದಿನಗಳಲ್ಲಿ ಮತಕ್ಷೇತ್ರದ ಎಲ್ಲಾ ಹೋಬಳಿಗಳ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಜನರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು’ ಎಂದು ತಿಳಿಸಿದರು.

ದೇವಸ್ಥಾನದ ಕಾರ್ಯದರ್ಶಿ ಮಲ್ಲಿಕಾರ್ಜುನಸ್ವಾಮಿ ಹೊಸಮಠ ಮಾತನಾಡಿ, ‘ದೇವಸ್ಥಾನದ ರಕ್ಷಣೆಗೆ ತಡೆಗೋಡೆ ಕಾಮಗಾರಿ ಮಳೆಗಾಲದೊಳಗೆ ಮುಗಿಸಲು ಶಾಸಕರು ಅನುದಾನ ನೀಡಬೇಕು ಎಂದರು, ಜತೆಗೆ ವಿವಿಧ ಬೇಡಿಕೆಗಳ ಮನವಿಯನ್ನು ಶಾಸಕರಿಗೆ ಸಲ್ಲಿಸಿದರು.

ಲೋಕೋಪಯೋಗಿ ಎಂಜಿನಿಯರ್ ರಮೇಶ ರಾಠೋಡ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಿದ್ದಣ್ಣಗೌಡ ಹಿರೇಗೌಡ, ಶರಣಭೂಪಾಲರಡ್ಡಿ, ಮಲ್ಲಿಕಾರ್ಜುನರಡ್ಡಿ ನಾಯ್ಕಲ್, ಬಸರಾಜಪ್ಪಗೌಡ ಶಾಂತವೀರ, ಖಾಜಾಮೈನುದ್ದೀನ್ ಮಿರ್ಚಿ ನಾಯ್ಕಲ್, ಶಿವರಾಜಪ್ಪಗೌಡ, ಗುತ್ತಿಗೆದಾರ ಶಿವಬಸವರಡ್ಡಿ ನಾಯ್ಕಲ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸೂಗೂರೆಡ್ಡಿ ಬೆಂಡೆಬೆಂಬಳಿ, ಸಹಾಯಕ ಎಂಜಿನಿಯರ್ ದೇವದಾಸ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-30-1727011145

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.