ಯಾದಗಿರಿ: ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಪ್ರಭುಲಿಂಗ ಮಾನಕರ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಡಳಿತಾಧಿಕಾರಿ ಅಮಾನತು ಮಾಡಿ ಆದೇಶಿಸಿದ್ದಾರೆ.
ಪ್ರಭುಲಿಂಗ ಅವರು ₹1.40 ಕೋಟಿ ಮೌಲ್ಯದ ಅಕ್ರಮ ಆಸ್ತಿ ಹೊಂದಿರುವುದನ್ನು ಲೋಕಾಯುಕ್ತ ಪೊಲೀಸ್ ಪತ್ತೆ ಹಚ್ಚಿದ್ದರು. ಹೀಗಾಗಿ ನಿಷ್ಪಕ್ಷಪಾತ ತನಿಖೆಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ. ಕಲಬುರಗಿ ಜಿಲ್ಲೆಯ ಅಳಂದ ಸಾರ್ವಜನಿಕ ಆಸ್ಪತ್ರೆಗೆ ಲೀನ್ ವರ್ಗಾವಣೆ ಮಾಡಲಾಗಿದೆ.
2023ರ ಡಿಸೆಂಬರ್ 5ರಂದು ಡಾ.ಪ್ರಭುಲಿಂಗ ಅವರ ಯಾದಗಿರಿ ಬಾಡಿಗೆ ಮನೆ ಮೇಲೆ, ಕಚೇರಿ, ಕಲಬುರಗಿಯಲ್ಲಿ ಲೋಕಾಯುಕ್ತ ಪೊಲೀಸರು ಶೋಧ ಮಾಡಿದ್ದರು.