ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ ಜಿಲ್ಲಾಧಿಕಾರಿಯಿಂದ ರಾಷ್ಟ್ರ ಧ್ವಜಾರೋಹಣ

Last Updated 1 ನವೆಂಬರ್ 2020, 5:48 IST
ಅಕ್ಷರ ಗಾತ್ರ

ಯಾದಗಿರಿ: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್., ಅವರು ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಕೋವಿಡ್‌ ಕಾರಣದಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಮಕ್ಕಳಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಕೋವಿಡ್‌ ವಾರಿಯರ್ಸ್‌ಗಳಾಗಿ ಸೇವೆ ಸಲ್ಲಿಸಿದ 30 ಜನರನ್ನು ಸೇರಿದಂತೆ ವಿವಿಧ ಕ್ಷೇತ್ರಗಳ ಮೂವರನ್ನು ಸನ್ಮಾನಿಸಲಾಯಿತು.

ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸನಗೌಡ ಪಾಟೀಲ ಯಡಿಯಾಪುರ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಎಸ್.ಚಂಡರಕಿ, ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ,ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಭೀಮವ್ವ ಮಲ್ಲೇಶಪ್ಪ ಅಚೋಲ, ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್‌ ಸೋನವಣೆ, ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾಶರ್ಮಾ, ಪ್ರಭಾರಿ ನಗರಸಭೆ ಪೌರಾಯುಕ್ತ ಎಚ್‌.ಬಕ್ಕಪ್ಪ ಸೇರಿದಂತೆ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT