ಬುಧವಾರ, ಸೆಪ್ಟೆಂಬರ್ 22, 2021
21 °C
ಕಿರಿಯ 3, ಹಿರಿಯ 4, ಪ್ರೌಢ ಶಾಲೆ ವಿಭಾಗದಲ್ಲಿ ಮೂವರಿಗೆ ಶಿಕ್ಷಕರಿಗೆ ‍ಪ್ರಶಸ್ತಿ ಪ್ರದಾನ

ಯಾದಗಿರಿ: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಸಾರ್ವಜನಿಕ ಶಿಕ್ಷಣ ಇಲಾಖೆಯ 2021–22ನೇ ಸಾಲಿನಲ್ಲಿ ನೀಡುವ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ 10 ಶಿಕ್ಷಕರು ಭಾಜನರಾಗಿದ್ದಾರೆ.

ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ 3, ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ 4, ಪ್ರೌಢ ಶಾಲಾ ವಿಭಾಗದಲ್ಲಿ ಮೂವರು ಸೇರಿದಂತೆ 10 ಜನ ಶಿಕ್ಷಕರಿಗೆ ನಗರದ ಚಿತ್ತಾಪುರ ರಸ್ತೆಯ ಆರ್‌ವಿ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ಬೆಳಿಗ್ಗೆ 10 ಗಂಟೆಗೆ ಪ್ರಶಸ್ತಿ ಪ್ರದಾನ ವಿತರಣೆ ನಡೆಯಲಿದೆ.

ಕಿರಿಯ ಪ್ರಾಥಮಿಕ ಶಾಲಾ ವಿಭಾಗ: ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಗುರುಮಠಕಲ್‌ ತಾಲ್ಲೂಕಿನ ಚಿಂತನಹಳ್ಳಿ ತಾಂಡಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಂಜುನಾಥ ಪಟ್ಟೇದ, ಯಾದಗಿರಿ ನಗರದ ಅಜೀಜ್‌ ಕಾಲೊನಿಯ ಕಿರಿಯ ಉರ್ದು ಶಾಲೆಯ ಅಮೀನಾ ರೂಹಿ, ಸುರಪುರ ತಾಲ್ಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕರಡಕಲ್‌ ಕ್ಯಾಂಪ್‌ನ ಶ್ರೀಶೈಲ್‌ ಗುಬ್ಯಾಡ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಹಿರಿಯ ಪ್ರಾಥಮಿಕ ಶಾಲಾ ವಿಭಾಗ: ಶಹಾಪುರ ತಾಲ್ಲೂಕಿನ ಸಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ರೂಪಾ ಕೆ., ಯಾದಗಿರಿ ತಾಲ್ಲೂಕಿನ ಅಲ್ಲಿಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಈರಪ‍್ಪ ಭಜಂತ್ರಿ, ಸುರಪುರ ತಾಲ್ಲೂಕಿನ ರುಕ್ಮಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುತ್ಯಾ ಕರಿವಳಿ, ಸುರಪುರ ತಾಲ್ಲೂಕಿನ ಮಾಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಿದ್ದನಗೌಡ ಅವರಿಗೆ ಪ್ರಶಸ್ತಿ ನೀಡಲಾಗುತ್ತಿದೆ.

ಸರ್ಕಾರಿ ಪ್ರೌಢ ಶಾಲಾ ವಿಭಾಗದಲ್ಲಿ ಪ್ರಶಸ್ತಿಗೆ ಭಾಜನ ಆದವರು: ಸುರಪುರ ತಾಲ್ಲೂಕಿನ ತಿಂಥಣಿ ಸರ್ಕಾರಿ ಪ್ರೌಢ ಶಾಲೆಯ ಚಿತ್ರಕಲಾ ಶಿಕ್ಷಕ ಚಂದ್ರಶೇಖರ ಬಿ. ಹೊಸಮಠ, ಶಹಾಪುರ ತಾಲ್ಲೂಕಿನ ಮದ್ದರಕಿ ಸರ್ಕಾರಿ ಪ್ರೌಢ ಶಾಲೆಯ ನಾಗಣ್ಣ, ಗುರುಮಠಕಲ್‌ ತಾಲ್ಲೂಕಿನ ಸರ್ಕಾರಿ ಪ್ರೌಢ ಶಾಲೆಯ ರವಿ ಎಂ.ಸಿ ಶಿಕ್ಷಕರು ಭಾಜನರಾಗಿದ್ದಾರೆ.

ಜಿಲ್ಲೆಯಲ್ಲಿ ಹೊಸದಾಗಿ ರಚನೆಯಾದಂತಹ ಹುಣಸಗಿ, ವಡಗೇರಾ ತಾಲ್ಲೂಕುಗಳಿಗೆ ಆದ್ಯತೆ ಸಿಕ್ಕಿಲ್ಲ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.