ಯಾದಗಿರಿ: ‘ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಂಬಂಧ 45 ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ, 54 ಕೊಳವೆಬಾವಿಗಳನ್ನು ಬಾಡಿಗೆ ಪಡೆಯುವ ಮೂಲಕ ನಿರಂತರವಾಗಿ ಕುಡಿಯುವ ನೀರು ಸರಬರಾಜು ಮಾಡಿ ಸಮಸ್ಯೆಯನ್ನು ತಾತ್ಕಾಲಿಕವಾಗಿ ನಿವಾರಿಸಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಲವೀಶ್ ಒರಡಿಯಾ ತಿಳಿಸಿದ್ದಾರೆ.

‘ಜಿಲ್ಲೆಯ 25 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ 45 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದೆ. ಯಾದಗಿರಿ ತಾಲ್ಲೂಕಿನಲ್ಲಿ 21 ಗ್ರಾಮಗಳನ್ನು ಗುರುತಿಸಿ 24 ಬಾಡಿಗೆ ಕೊಳವೆ ಬಾವಿಗಳನ್ನು ಪಡೆಯಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಗುರುಮಠಕಲ್ ತಾಲ್ಲೂಕಿನ 7 ಗ್ರಾ.ಪಂ.ಗಳ 12 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದ್ದು, 15 ಕೊಳವೆಬಾವಿಗಳ ಮುಖೇನ ನೀರು ಸರಬರಾಜು ಮಾಡಲಾಗುತ್ತಿದೆ. ವಡಗೇರಾದಲ್ಲಿ ಕಂಡುಬಂದ 7 ಗ್ರಾಮಗಳಲ್ಲಿ 10 ಕೊಳವೆಬಾವಿ ಹಾಗೂ ಸುರಪುರದ 5 ಗ್ರಾಮಗಳಲ್ಲಿ 5 ಕೊಳವೆ ಬಾವಿ ಪಡೆದು ನೀರು ಸರಬರಾಜು ಮಾಡಲಾಗುತ್ತಿದೆ’ ಎಂದಿದ್ದಾರೆ.

‘ಜಿಲ್ಲೆಯಲ್ಲಿ 7,349 ನೀರಿನ ಮಾದರಿಗಳನ್ನು ಪರೀಕ್ಷೆ ಮಾಡಿದ್ದು, 7,203 ಮಾದರಿಗಳು ಕುಡಿಯಲು ಯೋಗ್ಯವಿದೆ. ಅವುಗಳಲ್ಲಿ 146 ನೀರಿನ ಮಾದರಿಗಳು ಕುಡಿಯಲು ಯೋಗ್ಯವಿಲ್ಲ ಎಂಬುದು ಗೊತ್ತಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಕುಡಿಯುವ ನೀರಿನ ಸಂಬಂಧ ಸಹಾಯವಾಣಿ ಕೇಂದ್ರ ಸ್ಥಾಪನೆ ಮಾಡಲಾಗಿದೆ. ಬಂದಿರುವ 76 ದೂರುಗಳನ್ನು ಸ್ವೀಕರಿಸಿ ಇತ್ಯರ್ಥ ಮಾಡಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ಜಿಲ್ಲೆಯಲ್ಲಿ 471 ಶುದ್ಧ ಕುಡಿಯುವ ನೀರಿನ ಘಟಕಗಳ ಪೈಕಿ 303 ಕಾರ್ಯನಿರ್ವಹಿಸುತ್ತಿವೆ. ಸ್ಥಗಿತವಾಗಿರುವ 168 ಆರ್ಒ ಪ್ಲಾಂಟ್ಗಳ ಪೈಕಿ, 41 ಆರ್ಒ ಪ್ಲಾಂಟ್ಗಳನ್ನು ದುರಸ್ತಿ ಮಾಡಲಾಗಿದೆ. ಉಳಿದ 127 ಪ್ಲಾಂಟ್ಗಳ ದುರಸ್ತಿಗಾಗಿ ತಗಲುವ ವೆಚ್ಚದ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ’ ಎಂದು ವಿವರಿಸಿದ್ದಾರೆ.

‘ಬೇಸಿಗೆಯಲ್ಲಿ ಕುಡಿಯುವ ನೀರು ಲಭ್ಯತೆಯನ್ನು ಗಮನದಲ್ಲಿಟ್ಟುಕೊಂಡು ಜೆಜೆಎಂ ಅಡಿಯ ಬಾಕಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣವೇ ಸ್ಪಂದಿಸುವಂತೆ ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ’ ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-30-1132169311

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.