ವಡಗೇರಾ: ‘ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ನಿಯಂತ್ರಿಸಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಅವಿರತ ಶ್ರಮಿಸುತ್ತಿದ್ದು, ತಾಲ್ಲೂಕಿನ ಯಾವುದೇ ಗ್ರಾಮದಲ್ಲಿ ಕಲುಷಿತ ನೀರು ಪೂರೈಕೆ ಆಗದಂತೆ ಎಚ್ಚರಿಕೆ ವಹಿಸಬೇಕು’ ಎಂದು ಸಹಾಯಕ ಆಯುಕ್ತ ಶ್ರೀಧರ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧುವಾರ ಹಮ್ಮಿಕೊಂಡಿದ್ದ ಕುಡಿಯುವ ನೀರು ಹಾಗೂ ಇತರ ಯೋಜನೆಗಳ ಪ್ರಗತಿ ಪರಿಶೀಲನಾ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ತಾಲ್ಲೂಕಿನಾದ್ಯಂತ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆದರೆ ತಕ್ಷಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇತರ ಇಲಾಖೆ ಅಧಿಕಾರಿಗಳು ಸ್ಪಂದಿಸಿ, ತಕ್ಷಣ ಬೋರವೇಲ್ ಹಾಕಿಸಬೇಕು. ಹಾಗೆಯೆ ಗ್ರಾಮಗಳಲ್ಲಿ ಇರುವ ಬೋರವೇಲ್ಗಳು ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ನಿಂತಿದ್ದರೆ ಕೂಡಲೇ ಅವುಗಳನ್ನು ದುರಸ್ತಿಗೊಳಿಸಲು ಕ್ರಮಗಳನ್ನು ಕೈಗೊಳ್ಳಬೇಕು. ಅದರ ಜತೆಗೆ ಮನೆಗಳಿಗೆ ಸರಬರಾಜು ಮಾಡುವ ಕುಡಿಯುವ ನೀರಿನ ಸ್ಯಾಂಪಲ್ಗಳನ್ನು ಪರೀಕ್ಷಿಸಲು ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ತಿಳಿಸಿದರು.

ಇದೇ ವೇಳೆ ಮನರೇಗಾ ಯೋಜನೆ ಅನುಷ್ಠಾನ, ವಸತಿ ಯೋಜನೆ ಪ್ರಗತಿ ಹಾಗೂ ಕರವಸೂಲಾತಿ ನಿಗದಿ ಗುರಿ ತಲುಪುವುದು ಗ್ರಾಮೀಣ ಭಾಗದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವದರ ಜತೆಗೆ ಗ್ರಾಮೀಣ ಭಾಗದಲ್ಲಿ ಜನರು ಗೂಳೆ ಹೋಗುವುದನ್ನು ತಪ್ಪಿಸಲು ಆಯಾ ಗ್ರಾಪಂ ಗಳಲ್ಲಿ ನರೇಗಾ ಕೂಲಿ ಕೆಲಸ ಒದಗಿಸಿ ನಿಗದಿತ ಮಾನವ ದಿನಗಳ ಗುರಿ ತಲುಪಲು ಸಹಾಯಕ ಆಯುಕ್ತರು ಸೂಚಿಸಿದರು.

ತಾ.ಪಂ. ಇಒ ಶಶಿಧರ ಹಿರೇಮಠ ಮಾತನಾಡಿದರು.

ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ಕಿರಣಬಾಬು, ಯೋಜನಾಧಿಕಾರಿ ಶರಣಬಸವ, ಟಿಸಿ ರವೀಂದ್ರ ದೇಸಾಯಿ, ಟಿಐಇಸಿ ದುರ್ಗೆಶ, ಪಿಡಿಒ, ಆರೋಗ್ಯ ಇಲಾಖೆ, ಪಶು ಇಲಾಖೆ, ಕೃಷಿ ಇಲಾಖೆ, ಗ್ರಾಮೀಣ ಕುಡಿಯುವ ಇಲಾಖೆ ಅಧಿಕಾರಿಗಳು ಸೇರಿದಂತೆ ಇತರ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-30-1334570836

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.