ಶನಿವಾರ, 27 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ; ಮಹಿಳಾ ಗಸ್ತು ಪಡೆಯ ವಾಹನಕ್ಕೆ ಚಾಲನೆ

Last Updated 3 ಅಕ್ಟೋಬರ್ 2021, 3:33 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಮಹಿಳಾ ಪೊಲೀಸ್ ಪಡೆಯ ಗಸ್ತು ವಾಹನಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ಹಸಿರು ನಿಶಾನೆ ತೋರಿದರು.

ಈ ವೇಳೆ ಮಾತನಾಡಿದ ಅವರು, ಮಹಿಳೆಯರ ಮತ್ತು ಮಕ್ಕಳ ಸೇವೆಗಾಗಿ, ಸಹಾಯಕ್ಕಾಗಿ ಈ ಗಸ್ತು ವಾಹನ ಪ್ರಾರಂಭಿಸುತ್ತಿದ್ದು, ದಿನನಿತ್ಯ ಶಾಲೆ–ಕಾಲೇಜು, ಬಸ್ ನಿಲ್ದಾಣ ಮತ್ತು ರೈಲು ನಿಲ್ದಾಣ ಸೇರಿದಂತೆ ಹೆಚ್ಚು ಮಹಿಳೆಯರು ಮತ್ತು ಮಕ್ಕಳು ಸೇರುವ ಸ್ಥಳಗಳಲ್ಲಿ ಸಂಚರಿಸಲಿದೆ ಎಂದು ಮಾಹಿತಿ ನೀಡಿದರು.

ಶಾಲಾ-ಕಾಲೇಜಿನ ಹತ್ತಿರ ನಿಂತು ಹೆಣ್ಣು ಮಕ್ಕಳನ್ನು ಚುಡಾಯಿಸುವ ಮತ್ತು ಸತಾಯಿಸುವುದು ಮಾಡುವ ಪುಂಡ ಪೋಕರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದ್ದು, ವಾಹನದಲ್ಲಿ ಮಹಿಳಾ ಸಿಬ್ಬಂದಿಯವರು ಇರುತ್ತಾರೆ. ಎಲ್ಲಿಯಾದರೂ ಹೆಣ್ಣು ಮಕ್ಕಳನ್ನು ಚುಡಾಯಿಸುವುದು ಮತ್ತು ಸತಾಯಿಸುವುದು ಕಂಡುಬಂದರೆ ಯಾರಾದರೂ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದದ್ದು ಕಂಡು ಬಂದರೆ ದೂರವಾಣಿ ಸಂಖ್ಯೆ 9480803600 ಸಂಖ್ಯೆಗೆ ಕರೆ ಮಾಡಲು ತಿಳಿಸಿದರು.

ಪಿಂಕ್‌ ಬಣ್ಣದ ವಾಹನವನ್ನು ಮೀಸಲಾಗಿದೆ. ಡ್ರೈವರ್, ಎಎಸ್‌ಐ, ಮಹಿಳಾ ಸಿಬ್ಬಂದಿ ಗಸ್ತು ತಿರುಗುತ್ತಾರೆ. ಮಹಿಳಾ ಸುರಕ್ಷತೆಗಾಗಿ ಈ ವಾಹನ ತಿರುಗತ್ತದೆ. ನಂತರ ಜಿಲ್ಲಾದ್ಯಂತ ವಾಹನಗಳನ್ನು ಚಾಲನೆ ಮಾಡಲಾಗುವುದು ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT