ಯಾದಗಿರಿ: ‘ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿನ ಒಳನಾಡು ಜಲಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಮೀನು ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಮಹಿಳಾ ಸ್ವಸಹಾಯ ಸಂಘಗಳ ಆರ್ಥಿಕ ಸಬಲೀಕರಣವನ್ನು ಸಾಧಿಸುವ ಉದ್ದೇಶದಿಂದ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗುತ್ತಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಒರಡಿಯಾ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಮತ್ಸ್ಯ ಸಂಜೀವಿನಿ’ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಪ್ರಸಕ್ತ ಸಾಲಿನಲ್ಲಿ ಪ್ರಾರಂಭಗೊಂಡಿರುವ ‘ಮತ್ಸ್ಯ ಸಂಜೀವಿನಿ’ ಯೋಜನೆಯು ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಗಳನ್ನು ಒಳಗೊಂಡಿದ್ದು, ಮುಂದುರಿದು ಜಿಲ್ಲೆಯ 50 ಕೆರೆಗಳಿಗೆ ಯೋಜನೆಯನ್ನು ವಿಸ್ತರಿಸುವ ಗುರಿಯನ್ನು ಹೊಂದಲಾಗಿದೆ. ಆ ಮೂಲಕ ಉದ್ಯೋಗ ಸೃಷ್ಟಿಯ ಜತೆಗೆ ಮಹಿಳಾ ಸಂಘಗಳಿಗೆ ಶಾಶ್ವತ ಜೀವನೋಪಾಯದ ಅವಕಾಶಗಳನ್ನು ಕಲಿಸಲು ಆದ್ಯತೆ ನೀಡಲಾಗುತ್ತಿದೆ’ ಎಂದು ತಿಳಿಸಿದರು.

‘ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿರುವ ಎಲ್ಲಾ ಕೆರೆಗಳ ಸರ್ವೆ ನಂಬರ್, ಭೂ ಮಾಲೀಕತ್ವದ ವಿವರ, ಕೆರೆಯ ಪ್ರಸ್ತುತ ಬಳಕೆ, ನೀರಿನ ಲಭ್ಯತೆ ಸೇರಿದಂತೆ ಸಮಗ್ರ ಸ್ಥಿತಿಗತಿಯ ವರದಿ ಸಲ್ಲಿಸಬೇಕು’ ಎಂದು ಆದೇಶಿಸಿದರು.

‘ಯೋಜನೆಯ ಅನುಷ್ಠಾನದಲ್ಲಿ ಪಾರದರ್ಶಕತೆ ಮತ್ತು ವೇಗ ಕಾಪಾಡುವ ಉದ್ದೇಶದಿಂದ ಈ ಎಲ್ಲಾ ಪ್ರಕ್ರಿಯೆಗಳನ್ನು ಮೇ 20ರ ಒಳಗಾಗಿ ಪೂರ್ಣಗೊಳಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಲಭ್ಯವಿರುವ ಜಲ ಸಂಪನ್ಮೂಲಗಳ ಸಮರ್ಪಕ ಬಳಕೆಯೊಂದಿಗೆ ಸ್ಥಳೀಯ ಮಟ್ಟದಲ್ಲಿ ಮೀನು ಉತ್ಪಾದನೆ ಹೆಚ್ಚಿಸಿ ಆತ್ಮನಿರ್ಭರತೆ ಸಾಧಿಸುವ ದಿಸೆಯಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ’ ಎಂದು ಅಭಿಪ್ರಾಯಪಟ್ಟರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಸಿ.ಬಿ.ದೇವರಮನಿ, ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶರಣಬಸವ, ಯಾದಗಿರಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಹಾದೇವ ಬಾಬಳಗಿ, ಸಹಾಯಕ ನಿರ್ದೇಶಕ ಮಲ್ಲಣ್ಣ ಸುಂಕನೂರ, ಯಾದಗಿರಿ ಹಾಗೂ ಗುರುಮಠಕಲ್ ತಾಲ್ಲೂಕಿನ ಅಭಿವೃದ್ಧಿ ಅಧಿಕಾರಿಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಸಂಜೀವಿನಿ ಸಿಬ್ಬಂದಿ ಸಭೆಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-30-801893933

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.