ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಮಾಜಿ ಸಚಿವ ರಾಜಾ ಮದನಗೋಪಾಲ ನಾಯಕ ನಿಧನ

Last Updated 27 ಜುಲೈ 2020, 8:34 IST
ಅಕ್ಷರ ಗಾತ್ರ

ಯಾದಗಿರಿ: ಸುರಪುರದ ಹಿರಿಯ ರಾಜಕೀಯ ಮುತ್ಸದ್ದಿ ಮಾಜಿ ಸಚಿವ ಸಗರ ನಾಡಿನ ಸಾಂಸ್ಕೃತಿಕ ರಾಯಭಾರಿ ರಾಜಾ ಮದನಗೋಪಾಲ ನಾಯಕ (70) ಅವರು ನಿಧನರಾಗಿದ್ದಾರೆ.

ರಾಜಾ ಮದನಗೋಪಾಲ ನಾಯಕ ಅವರು ಶಿಕ್ಷಣ, ಸಾಹಿತ್ಯ, ಚಿತ್ರಕಲೆ, ನಾಟಕ ಮುಂತಾದ ಕ್ಷೇತ್ರಗಳಿಗೆ ಪ್ರೋತ್ಸಾಹ ನೀಡುತ್ತಿದ್ದರು. ಸಗರನಾಡಿನ ಸಾಂಸ್ಕೃತಿಕ ರಾಯಭಾರಿ ಎಂದೇ ಬಿಂಬಿತವಾಗಿದ್ದರು.

1983ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಪ್ರಥಮ ಬಾರಿಗೆ ಗೆಲುವು ಸಾಧಿಸಿದರು. ನಂತರ 1985ರಲ್ಲಿ ನಡೆದ ಚುನಾವಣೆಯಲ್ಲಿ ಎರಡನೇ ಬಾರಿಗೆ ಗೆಲುವು ಸಾಧಿಸಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಅವರ ಸಂಪುಟದಲ್ಲಿ ಕೃಷಿ ಸಚಿವರಾಗಿದ್ದರು. ನಂತರ 1989ರಲ್ಲಿ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು.ರಾಯಚೂರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಕೇವಲ 501 ಮತಗಳ ಅಂತರದಿಂದ ಸೋಲುನುಭವಿಸಿದರು.

ಸುರಪುರದ ಕನ್ನಡ ಸಾಹಿತ್ಯ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಮತ್ತು ರಿಕ್ರೇಯೆಷನ್ ಕಬ್ಲ್ ಅಧ್ಯಕ್ಷರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT