ಯಾದಗಿರಿ: ‘ನಿತ್ಯ ಇಂಧನ ಬೆಲೆ ಏರಿಸುವ ಮೂಲಕ ಕೇಂದ್ರ ಸರ್ಕಾರ ಜನರ ಜೀವ ಹಿಂಡುವಂತಹ ಕೆಲಸ ಮಾಡುತ್ತಿದೆ. ಜೀವನ ನಡೆಸಲು ಪರದಾಡುವಂತಹ ಪರಿಸ್ಥಿತಿ ತಂದೊಡ್ಡಿದೆ’ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಭೀಮಣ್ಣ ಮೇಟಿ ಆರೋಪಿಸಿದ್ದಾರೆ.

‘ಜನರ ಜೀವನ ದಿನದಿಂದ ದಿನಕ್ಕೆ ಅಧೋಗತಿಗೆ ಸಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬೇಜವಾಬ್ದಾರಿ ಆಡಳಿತ ಸಾಕ್ಷಿಯಾಗಿದೆ. ಕೇಂದ್ರ ಸರ್ಕಾರ ಬಡವರು ಮತ್ತು ಮಧ್ಯಮ ವರ್ಗದವರು ಜೀವನ ನಡೆಸುವುದು ಬೇಕಾಗಿಲ್ಲ. ಅವರಿಗೆ ಶ್ರೀಮಂತ ಮತ್ತು ಉದ್ಯಮಿಗಳ ಸಬಲೀಕರಣ ಮಾಡುವ ಏಕೈಕ ಉದ್ದೇಶವಾಗಿದೆ. ಹೀಗಾಗಿ, ಬಡವರ ಬದುಕು ಭಾರತದಲ್ಲಿ ಸಂಪೂರ್ಣವಾಗಿ ಬೀದಿಗೆ ಬಂದಿದೆ’ ಎಂದು ಪ್ರಕಟಣೆಯಲ್ಲಿ ದೂರಿದ್ದಾರೆ.

‘ದೇಶದಲ್ಲಿ ಇಂಧನ ಬೆಲೆ ಏರಿಕೆ ಬಡವರ ಜೀವನ ಸುಡುತ್ತಿದೆ. ಅದರೊಳಗೆ ಸಿಲುಕಿ ಬೆಂದು ಹೋಗುವಂತಹ ಪರಿಸ್ಥಿತಿ ಬಂದಿದೆ. ಬಿಜೆಪಿ ಸರ್ಕಾರದ ಆಡಳಿತ ಇಡೀ ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಂಪೂರ್ಣವಾಗಿ ಮಾರಕವಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಜನರು ಭಾರಿ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದಿದ್ದಾರೆ.

‘ದಿನ ಬೆಳಗಾದರೆ ಇಂಧನ ಬೆಲೆ ಏರಿಕೆ ಕೇಳಿ ಜನರಿಗೆ ಶಾಕ್ ಆಗುತ್ತಿದೆ. ದುಡಿಯುವ ಕೈಗಳಿಗೆ ಕೆಲಸವಿಲ್ಲ. ನೀಟ್ ಪ್ರಶ್ನೆ ಪತ್ರಿಕೆ ಬಹಿರಂಗವಾಗಿದೆ. ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಜೀವನ ನಡೆಸಲು ಆಗುತ್ತಿಲ್ಲ. ಆದರೆ, ಕೇಂದ್ರ ಸರ್ಕಾರಕ್ಕೆ ಇದ್ಯಾವುದರ ಬಗ್ಗೆ ಚಿಂತೆ ಇಲ್ಲ. ಅವರಿಗೆ ಬೆಲೆ ಏರಿಕೆ ಮಾಡುವುದೆ ದೊಡ್ಡ ಸಾಧಾನೆಯಾಗಿದೆ’ ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-30-236886913

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.