‘ಬಾಕಿ ತೆರಿಗೆ ಪಾವತಿಸಿ ನಗರಸಭೆಗೆ ಸಹಕರಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ನಿರಂತರವಾಗಿ ಪತ್ರ ಬರೆದು ನೆನಪಿಸುವ ಕಾರ್ಯ ನಡೆಯುತ್ತಿದೆ. ಕೆಲವರು ಪತ್ರಕ್ಕೆ ಸ್ಪಂದಿಸಿ ಒಂದಿಷ್ಟು ಬಾಕಿ ಮೊತ್ತವನ್ನು ಪಾವತಿ ಮಾಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಿಂದ ₹ 6.76 ಲಕ್ಷ ಪಾವತಿಯಾಗಿದೆ’ ಎಂದು ಪೌರಾಯುಕ್ತ ಉಮೇಶ ಚವ್ಹಾಣ ‘ಪ್ರಜಾವಾಣಿ’ಗೆ ತಿಳಿಸಿದರು.