ಗುರುವಾರ , ಜೂನ್ 24, 2021
25 °C

ಯಾದಗಿರಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಕೋವಿಡ್‌ಗೆ ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಕಲಬುರ್ಗಿಯ ಕರುಣೇಶ್ವರ ನಗರದ ನಿವಾಸಿ, ಯಾದಗಿರಿಯ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ಬುದ್ಧೇಶ್ ಶಂಕರ ಸಿಂಗೆ (53) ಅವರು ಸೊಲ್ಲಾಪುರದ  ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು.

ಕೊರೊನಾ ಸೋಂಕಿನಿಂದ ಬಳಲಿದ್ದ ಅವರು ಚಿಕಿತ್ಸೆಯ ನಂತರ ಗುಣಮುಖರಾಗಿ ಮರಳಿದ್ದರು. ಆದರೆ, ಕೆಲವೇ ದಿನಗಳಲ್ಲಿ ಮತ್ತೆ ಅವರಿಗೆ ಬಹು ಅಂಗಾಂಗ ವೈಫಲ್ಯ ಕಂಡುಬಂದಿದ್ದರಿಂದ ಸೊಲ್ಲಾಪುರದ ವೈದ್ಯರು ಕಪ್ಪುಶಿಲೀಂದ್ರ (ಬ್ಲ್ಯಾಕ್‌ ಫಂಗಸ್‌) ಸೋಂಕು ಇರಬಹುದು ಎಂದು ಶಂಕಿಸಿದ್ದರು.ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಅವರ ಸ್ವಂತ ಊರಾದ ಅಫಜಲಪುರ ತಾಲ್ಲೂಕಿನ ಗೌರ (ಬಿ) ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು