ಸುರಪುರ: ‘ಗ್ರಾಮ ಪಂಚಾಯಿತಿಗಳ ಆರ್ಥಿಕ ಸಧೃಢತೆಗೆ ತೆರಿಗೆ ವಸೂಲಾತಿ ಅತ್ಯಂತ ಮುಖ್ಯ. ಜನರ ಮನವೊಲಿಸಿ ಶೇ 100 ರಷ್ಟು ತೆರಿಗೆ ವಸೂಲು ಮಾಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ ಓರಡಿಯಾ ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಸೂಚಿಸಿದರು.

ತಾಲ್ಲೂಕಿನ ವಾಗಣಗೇರಿ ಗ್ರಾಮ ಪಂಚಾಯಿತಿಗೆ ಬುಧವಾರ ಭೇಟಿ ನೀಡಿದ ಅವರು ಕಡತಗಳನ್ನು ಪರಿಶೀಲಿಸಿ ಸಿಬ್ಬಂದಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

‘ಮನೆ ತೆರಿಗೆ, ನೀರಿನ ತೆರಿಗೆ ಇತರ ತೆರಿಗೆಗಳ ವಸೂಲಾತಿ ಪಟ್ಟಿಯನ್ನು ಪರಿಶೀಲಿಸಿ ಸಾರ್ವಜನಿಕರಲ್ಲಿ ತೆರಿಗೆ ಪಾವತಿ ಕುರಿತು ಜಾಗೃತಿ ಮೂಡಿಸಬೇಕು’ ಎಂದು ತಿಳಿಸಿದರು.

ನರೇಗಾ ಯೋಜನೆಯಲ್ಲಿ ಕೈಗೊಳ್ಳಲಾದ ವಿವಿಧ ಕಾಮಗಾರಿಗಳ ಮಸ್ಟರ್ ರೂಲ್, ಕೂಲಿ ಪಾವತಿ ವಿವರ, ತಾಂತ್ರಿಕ ದಾಖಲಾತಿಗಳನ್ನು ಪರಿಶೀಲಿಸಿದರು.

‘ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಮತ್ತು ಪಾರದರ್ಶಕವಾಗಿ ಕೈಗೊಳ್ಳಬೇಕು. ಕೂಲಿ ಕಾರ್ಮಿಕರಿಗೆ ಸಮಯಕ್ಕೆ ಸರಿಯಾಗಿ ವೇತನ ಪಾವತಿ ಮಾಡಬೇಕು’ ಎಂದು ತಿಳಿಸಿದರು.

ಕುಡಿಯುವ ನೀರಿನ ಸಮಸ್ಯೆ ಕುರಿತು ಗ್ರಾಮಸ್ಥರಿಂದ ಮಾಹಿತಿ ಪಡೆದರು. ಕುಡಿಯುವ ನೀರಿನ ಬಾವಿಗಳನ್ನು ಪರಿಶೀಲಿಸಿ, ನೀರಿನ ಮಟ್ಟ, ಸ್ವಚ್ಛತೆ, ಸರಬರಾಜು ವ್ಯವಸ್ಥೆಯನ್ನು ವೀಕ್ಷಿಸಿದರು. ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದರು.

ಎನ್ಆರ್ಎಲ್ಎಂ ಒಕ್ಕೂಟದ ಪುಸ್ತಕಗಳು, ಸಭಾ ದಾಖಲೆಗಳು, ಹಣಕಾಸು ನಿರ್ವಹಣೆ ಪರಿಶೀಲಿಸಿ, ನಿಯಮಾನುಸಾರ ಮತ್ತು ನವೀಕೃತವಾಗಿ ನಿರ್ವಹಿಸುವಂತೆ ತಿಳಿಸಿದರು. ಮಹಿಳಾ ಸ್ವಸಹಾಯ ಸಂಘಗಳ ಚಟುವಟಿಕೆಗಳನ್ನು ಇನ್ನಷ್ಟು ಬಲಪಡಿಸುವಂತೆ ತಿಳಿಸಿದರು.

ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳಿಗೆ ನೀಡಲಾಗುತ್ತಿರುವ ಪೌಷ್ಟಿಕ ಆಹಾರ, ಹಾಜರಾತಿ, ಸ್ವಚ್ಛತೆ, ಮೂಲಸೌಕರ್ಯಗಳ ಬಗ್ಗೆ ಮಾಹಿತಿ ಪಡೆದರು. ಗ್ರಾಮ ಗ್ರಂಥಾಲಯಕ್ಕೆ ಭೇಟಿ ನೀಡಿ ಪುಸ್ತಕಗಳ ನಿರ್ವಹಣೆ, ಓದುಗರ ಸೌಲಭ್ಯಗಳು, ಕಲಿಕಾ ವಾತಾವರಣದ ಕುರಿತು ಪರಿಶೀಲಿಸಿದರು.

ವಿದ್ಯಾರ್ಥಿಗಳು ಮತ್ತು ಯುವಕರಿಗೆ ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ನಂತರ ಅರಕೇರಾ ಕೆ. ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಸಜ್ಜನ್, ತಾಂತ್ರಿಕ ಸಂಯೋಜಕ ಶಿವಯೋಗಿ ಹಿರೇಮಠ, ಪಿಡಿಓ ಪುತ್ರಪ್ಪಗೌಡ, ಉಮರ್, ಐಇಸಿ ಸಂಯೋಜಕ ಮಲ್ಲಿಕಾರ್ಜುನ, ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-30-1490626200

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.