ಗುರುಮಠಕಲ್: ‘ಪಟ್ಟಣದ ಡಾ.ಅಂಬೇಡ್ಕರ್ ವೃತ್ತದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಮತ್ತು ಹಸಿರುಕ್ರಾಂತಿ ಹರಿಕಾರ ಬಾಬುಜಗಜೀವನರಾಂ ಅವರ ಪುತ್ಥಳಿಗಳ ಪ್ರದೇಶದಲ್ಲಿ ನಿಯಮಿತವಾಗಿ ನಿರ್ವಹಣೆ ಮಾಡಬೇಕು’ ಎಂದು ಡಿಎಸ್ಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಲಾಲಪ್ಪ ತಲಾರಿ ಆಗ್ರಹಿಸಿದ್ದಾರೆ.

ಈ ಕುರಿತು ಶನಿವಾರ ಪತ್ರಿಕಾ ಹೇಳಿಕೆ ನೀಡಿದ ಅವರು, ‘ರಾಷ್ಟ್ರನಾಯಕರ ಮೂರ್ತಿಗಳಿರುವಲ್ಲಿ ಸ್ವಚ್ಛತಾ ಕಾರ್ಯ, ಅಲ್ಲಿನ ಸಸಿಗಳಿಗೆ ನೀರುಣಿಸುವಂತೆ ಹಲವು ಬಾರಿ ಪುರಸಭೆಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಬೇಸಿಗೆ ವೇಳೆ ನೀರಿಲ್ಲದೆ ಸಸಿಗಳು ಬಾಡುತ್ತಿವೆ’ ಎಂದು ಆರೋಪಿಸಿದ್ದಾರೆ.

‘ಜಿಲ್ಲಾಧಿಕಾರಿಗಳು ಕೂಡಲೇ ಸಂಬಂಧಪಟ್ಟ ಪುರಸಭೆಗೆ ಮಹಾಪುರುಷರ ಮೂರ್ತಿಗಳ ಪ್ರದೇಶದ ಸೂಕ್ತ ನಿರ್ವಹಣೆ ಮಾಡುವಂತೆ ನಿರ್ದೇಶನ ನೀಡಬೇಕು, ನಿರ್ವಹಣೆಗೆ ಸಿಬ್ಬಂದಿ ನಿಯೋಜನೆ ಮಾಡಬೇಕು. ಇದನ್ನು ಒಂದು ವೇಳೆ ನಿರ್ಲಕ್ಷಿಸಿದರೆ ಅಧಿಕಾರಿಗಳ ವಿರುದ್ಧ ಕ್ರಮವಹಿಸಬೇಕು. ಶೀಘ್ರವೇ ಸ್ವಚ್ಛತೆ ಮತ್ತು ನಿರ್ವಹಣೆಗೆ ಕ್ರಮವಹಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯವಾಗಲಿದೆ’ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-30-1910662304

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.