ಯಾದಗಿರಿ: ‘ಪಿಸಿ ಮತ್ತು ಪಿಎನ್ಡಿಸಿ ಕಾಯ್ದೆಯನ್ನು ಉಲ್ಲಂಘಿಸಿದ ಜಿಲ್ಲೆಯ ಹುಣಸಗಿ ಪಟ್ಟಣದ ಹೊರವಲಯದ ಅಪ್ಪಾ ಸ್ಕ್ಯಾನಿಂಗ್ ಸೆಂಟರ್ ಅನ್ನು ಮುಚ್ಚಲಾಗಿದೆ ಮತ್ತು ಶಹಾಪುರ ನಗರದಲ್ಲಿ ತಜ್ಞತೆಗೆ ವಿರುದ್ಧ ಚಿಕಿತ್ಸೆ ನೀಡಿದ ಆಸ್ಪತ್ರೆಗಳನ್ನು ಮುಚ್ಚಿ, ಕಾನೂನು ಕ್ರಮವಹಿಸಲಾಗಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ ಬಿರಾದರ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ‘ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಅವರ ನಿರ್ದೇಶನದಂತೆ, ನೋಡಲ್ ಅಧಿಕಾರಿ ಡಾ.ಜ್ಯೋತಿ ಡಿ.ಕಟ್ಟಿಮನಿ ಅವರ ಜತೆಗೂಡಿ ಪಿಸಿ ಮತ್ತು ಪಿಎನ್ಡಿಸಿ ನಿಯಮದ ಅನುಷ್ಠಾನದ ಕುರಿತು ಆಸ್ಪತ್ರೆಗಳಿಗೆ ದಿಢೀರ್ ಭೇಟಿ ಮತ್ತು ಪರಿಶೀಲನೆ ನಡೆಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಪರವಾನಗಿ ಪಡೆದ ಖಾಸಗಿ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಸೆಂಟರ್ಗಳು ನಿಯಮ ಉಲ್ಲಂಘಸಿದರೆ ಅವರ ವಿರುದ್ಧ ಕಾನೂನು ಕ್ರಮವಹಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-30-1535424596

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.