ಯಾದಗಿರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮೇ 10ರಂದು ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ನಡೆಯಲಿದೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಹಾಯಕ ಆಯುಕ್ತ ಶ್ರೀಧರ್ ಗೋಟುರ್ ಅಧ್ಯಕ್ಷತೆಯಲ್ಲಿ ಜಯಂತಿ ಆಚರಿಸುವ ಕುರಿತ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು.

ಅಂದು ಬೆಳಿಗ್ಗೆ 11ಕ್ಕೆ ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಜಯಂತಿ ಕಾರ್ಯಕ್ರಮ ನಡೆಯಲಿದೆ. ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಲಾಗುವುದು. ವೇದಿಕೆ, ಆಸನದ ವ್ಯವಸ್ಥೆ, ಶಿಷ್ಟಾಚಾರದಂತೆ ಗಣ್ಯರು, ಉಪನ್ಯಾಸಕರನ್ನು ಆಹ್ವಾನಿಸುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಯಿತು.

‘ಕಾರ್ಯಕ್ರಮಗಳು ನಡೆಯುವ ವೇಳೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು. ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿ, ಆಮಂತ್ರಣ ಪತ್ರಿಕೆ ವಿತರಿಸಬೇಕು. ತಾಲ್ಲೂಕು ಮಟ್ಟದ ಶಾಲಾ, ಕಾಲೇಜು, ಗ್ರಾಮ ಪಂಚಾಯಿತಿ, ವಿವಿಧ ಕಚೇರಿಗಳಲ್ಲಿ ಜಯಂತಿ ಆಚರಣೆ ಮಾಡಿ ಮುಖ್ಯ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಶ್ರೀಧರ ಗೋಟುರ್ ಸೂಚಿಸಿದರು

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರ ದೇವಿ ಮಠಪತಿ ಸ್ವಾಗತಿಸಿದರು. ಸಾಮಾಜದ ಮುಖಂಡರಾದ ಅಮ್ಮಣಗೌಡ ಅನಸುಗುರ, ಮಲ್ಲಿಕಾರ್ಜುನ ತಳಕ್, ರುದ್ರಗೌಡ ಗುರುಸುಣಿಗಿ, ಚನ್ನಾರೆಡ್ಡಿಗೌಡ ಪಾಟೀಲ, ಮಲ್ಲಣಗೌಡರ, ಅಮರೇಶ್ ಬಿಲ್ಹಾರ್, ವಿಶ್ವನಾಥ ರೆಡ್ಡಿ, ಮಲ್ಲಿಕಾರ್ಜುನ ರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-30-350561854

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.