ಯಾದಗಿರಿ: ‘ಮಹಾಸಾಧ್ವಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಮೇ 10ರ ಭಾನುವಾರದಂದು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ರೆಡ್ಡಿ ಸಮಾಜ ಅಧ್ಯಕ್ಷ ರಾಮರಡ್ಡಿಗೌಡ ತಂಗಡಗಿ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಜಯಂತಿ ಆಯೋಜಿಸಿ, ಹೇಮರಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಗೌರವ ಅರ್ಪಿಸಲಾಗುವುದು. ಸಮಾಜದ ಬಾಂಧವರು ಹಾಗೂ ಹೇಮರಡ್ಡಿ ಮಲ್ಲಮ್ಮ ಅವರ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು’ ಎಂದು ಕೋರಿದ್ದಾರೆ.

‘ಬೆಳಿಗ್ಗೆ ಬಸವೇಶ್ವರ ನಗರದ ಈಶ್ವರ ಬಸವಣ್ಣ ದೇವಸ್ಥಾನದಿಂದ ಸರ್ಕಾರಿ ಪದವಿ ಮಹಾವಿದ್ಯಾಲಯದವರೆಗೆ ವಿವಿಧ ಜಾನಪದ ಕಲಾತಂಡಗಳ ಉಪಸ್ಥಿತಿಯಲ್ಲಿ ಹೇಮರಡ್ಡಿ ಮಲ್ಲಮ್ಮನವರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಲಿದೆ’ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-30-1021620509

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.