ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಮನೆ-ಮನೆಗೆ ತೆರಳಿ ಕೋವಿಡ್‌ ಲಸಿಕೆ ಹಾಕಿ: ಡಿಸಿ

ವಿವಿಧ ಹಳ್ಳಿಗಳಿಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ, ಪರಿಶೀಲನೆ
Last Updated 18 ಆಗಸ್ಟ್ 2021, 3:18 IST
ಅಕ್ಷರ ಗಾತ್ರ

ಯಾದಗಿರಿ: ‘ಮನೆ- ಮನೆಗೆ ತೆರಳಿ ಲಸಿಕೆ ಹಾಕಬೇಕು. ಈ ಮೂಲಕ ಮೂರನೇ ಅಲೆ ತಡೆಯಲು ಶ್ರಮಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಆರೋಗ್ಯ ಸಿಬ್ಬಂದಿಗೆ ಸೂಚಿಸಿದರು.

ವಡಗೇರಾ ತಾಲ್ಲೂಕಿನ ನಾಯ್ಕಲ್, ಶಹಾಪುರ ತಾಲ್ಲೂಕಿನ ಖಾನಾಪುರ, ದೋರನಹಳ್ಳಿ ಗ್ರಾಮಗಳ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿ ಅವರು ಮಾತನಾಡಿದರು.

ಪ್ರತಿ ಆಶಾ ಕಾರ್ಯಕರ್ತೆಯರು ಕನಿಷ್ಠ 30 ಜನರಿಗೆ ಲಸಿಕೆ ನೀಡುವ ಗುರಿ ಹೊಂದಬೇಕು. ಶಾಲಾ ಶಿಕ್ಷಕರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರೆಲ್ಲರೂ ಲಸಿಕೆ ಪಡೆದು ಜನರ ಮನವೊಲಿಸಬೇಕು ಎಂದು ಅವರು ಹೇಳಿದರು.

ಲಸಿಕಾಕರಣದ ಬಗ್ಗೆ ಜನರು ಧನಾತ್ಮಕವಾಗಿ ಸ್ಪಂದಿಸಲು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜಾಥಾ ಮತ್ತು ಬೀದಿ ನಾಟಕಗಳಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ತಾಲ್ಲೂಕಿನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ನಾಯ್ಕಲ್ ಗ್ರಾಮದಲ್ಲಿ 7,188 ಜನರಿಗೆ ಲಸಿಕೆ ಹಾಕುವ ಗುರಿ ಹೊಂದಿದ್ದು, ಇಲ್ಲಿಯವರೆಗೆ 4,035 ಜನರಿಗೆ ಲಸಿಕೆ ನೀಡಿ ಶೇ 55 ರಷ್ಟು ಪ್ರಗತಿ ಸಾಧಿಸಿದೆ. ಖಾನಾಪುರ ಗ್ರಾಮದಲ್ಲಿ 5,488 ಜನರಿಗೆ ಗುರಿ ಹೊಂದಿದ್ದು, ಇಲ್ಲಿಯವರೆಗೆ 3,068 ಜನರಿಗೆ ನೀಡಿ ಶೇ 50 ರಷ್ಟು ಲಸಿಕೆ ನೀಡಲಾಗಿದೆ. ದೋರನಹಳ್ಳಿ ಗ್ರಾಮದಲ್ಲಿ 6,058 ಜನರಿಗೆ ಗುರಿ ಹೊಂದಿದ್ದು, 4,871ಜನರಿಗೆ ಲಸಿಕೆ ನೀಡಿ ಶೇ 55 ರಷ್ಟು ಪ್ರಗತಿ ಸಾಧಿಸಿದೆ ಎಂದು ವೈದ್ಯಾಧಿಕಾರಿಗಳು ಮಾಹಿತಿ ನೀಡಿದರು.

ನಾಡಕಚೇರಿಗೆ ದಿಢೀರ್ ಭೇಟಿ: ಇದೇ ವೇಳೆ ಶಹಾಪುರ ತಾಲ್ಲೂಕಿನ ದೋರನಹಳ್ಳಿ ಮತ್ತು ಗೋಗಿ (ಕೆ) ನಾಡಕಚೇರಿಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ ನೀಡಿ ಕಂದಾಯ ಇಲಾಖೆಯ ಪ್ರಗತಿ
ಪರಿಶೀಲಿಸಿದರು.

ಪೈಕಿ ಪಹಣಿ, ಮೋಜನಿ ಕಡತಗಳು, ನವೋದಯ ಆ್ಯಪ್ ಮತ್ತು ಸ್ಮಶಾನ ಭೂಮಿಗಳ ಲಭ್ಯತೆ ಬಗ್ಗೆ ಹಾಗೂ ಸಕಾಲ ಯೋಜನೆಗಳ ಪ್ರಗತಿಯ ಮಾಹಿತಿ ಪಡೆದರು.

ಪ್ರತಿ 15 ದಿನಕ್ಕೊಮ್ಮೆ ತಾಲ್ಲೂಕು ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಕಡ್ಡಾಯವಾಗಿ ಮಾಡಬೇಕು. ಪ್ರಗತಿ ಕುಂಠಿತವಾಗದಂತೆ ನೋಡಿಕೊಳ್ಳಬೇಕು ಎಂದು ತಹಶೀಲ್ದಾರ್‌ಗೆ ಜಿಲ್ಲಾಧಿಕಾರಿ ಸೂಚಿಸಿದರು.

ಈ ವೇಳೆ ಉಪವಿಭಾಗಾಧಿಕಾರಿ ಪ್ರಶಾಂತ ಹನಗಂಡಿ, ಆರ್‌ಸಿಎಚ್‌ಒ ಡಾ.ಲಕ್ಷ್ಮಿಕಾಂತ ಒಂಟಿಪೀರ, ಶಹಾಪುರ ತಹಶೀಲ್ದಾರ ಮಧುರಾಜ್ ಹಾಗೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT