ಹುಣಸಗಿ: ‘ನಮ್ಮ ಭಾಗದ ವಿದ್ಯಾರ್ಥಿಗಳಲ್ಲಿ ಅಸಮಾನ್ಯ ಪ್ರತಿಭೆ ಇದೆ. ಅವರಿಗೆ ಸೂಕ್ತ ಮಾರ್ಗದರ್ಶನ ಸಿಕ್ಕಾಗ ಮಾತ್ರ ಈ ರೀತಿ ಉತ್ತಮ ಸಾಧನೆ ಮಾಡಲು ಸಾಧ್ಯ’ ಎಂದು ಮಾಜಿ ಸಚಿವ ರಾಜೂಗೌಡ ಹೇಳಿದರು.

ಹುಣಸಗಿ ಪಟ್ಟಣದ ಅಮ್ಮನ ಮನೆಯ ಆವರಣದಲ್ಲಿ ಮಾತೋಶ್ರೀ ಸುಶೀಲಮ್ಮ ಪಟ್ಟಣಶೆಟ್ಟಿ ಸ್ಮಾರಕ ಪ್ರತಿಷ್ಠಾನದಿಂದ ಹಮ್ಮಿಕೊಂಡಿದ್ದ ಹುಣಸಗಿ ತಾಲ್ಲೂಕಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚನ್ನಬಸಪ್ಪ ಮುಧೋಳ ಮಾತನಾಡಿ, ‘ಯಾದಗಿರಿ ಜಿಲ್ಲೆ ಹಿಂದುಳಿದಿದೆ ಎಂಬ ಹಣೆಪಟ್ಟಿ ಅಳಿಸಲು ಜಿಲ್ಲೆಯ ಎಲ್ಲಾ ಶಿಕ್ಷಕರು ಹಗಲು ರಾತ್ರಿ ಎನ್ನದೇ ಶ್ರಮಿಸಿದ್ದರಿಂದ ಈ ಬಾರಿ ನಿರೀಕ್ಷೆಗಿಂತ ಉತ್ತಮ ಫಲಿತಾಂಶ ಬಂದಿದೆ’ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷೆ ಮಮತಾ ದಯಾನಂದ ಹಾಗೂ ಉದ್ಯಮಿ ದಯಾನಂದ ಮಾತನಾಡಿ, ‘ಇಲ್ಲಿನ ಗ್ರಾಮೀಣ ಭಾಗದ ಮಕ್ಕಳಿಗೆ ಪ್ರೋತ್ಸಾಹಿಸಿ ಅವರಿಗೆ ಇನ್ನೂ ಹೆಚ್ಚಿನ ಸಾಧನೆ ಮಾಡುವಂತಾಗಲು ಈ ಪ್ರತಿಷ್ಠಾನ ಸದಾ ಪ್ರಯತ್ನಿಸುತ್ತಿದೆ. ಕಳೆದ 15 ವರ್ಷಗಳಿಂದಲೂ ನೂರಾರು ಮಕ್ಕಳಿಗೆ ಈ ಪ್ರೋತ್ಸಾಹ ಕಾರ್ಯ ನಡೆಸಿಕೊಂಡು ಬಂದಿದೆ’ ಎಂದು ಹೇಳಿದರು. ಸಾನ್ನಿಧ್ಯ ವಹಿಸಿದ್ದ ದೇವಾಪುರದ ಶಿವಮೂರ್ತಿ ಶಿವಾಚಾರ್ಯರು ಹಾಗೂ ಉಪನ್ಯಾಸಕ ಕನಕಪ್ಪ ವಾಗನಗೇರಿ ಮಾತನಾಡಿದರು. ಪ್ರತಿಷ್ಠಾನದ ಕಾರ್ಯದರ್ಶಿ ಭೀಮಸೇನರಾವ ಕುಲಕರ್ಣಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮಾತೋಶ್ರೀ ಸುಶೀಲಮ್ಮರ ಮೂರ್ತಿಗೆ ಪೂಜೆ ಸಲ್ಲಿಸಲಾಯಿತು.

ನೂರಕ್ಕೂ ಹೆಚ್ಚು ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ₹ 5 ಸಾವಿರ ನಗದು, ನೋಟ್ಬುಕ್ ಹಾಗೂ ಪ್ರಶಸ್ತಿ ಫಲಕ, ಮೆಡಲ್ ನೀಡಿ ಗೌರವಿಸಲಾಯಿತು. ಶೇ 100 ಫಲಿತಾಂಶ ತಂದಿರುವ ಶಾಲೆಗಳ ಮುಖ್ಯ ಶಿಕ್ಷಕರನ್ನು ಸತ್ಕರಿಸಲಾಯಿತು.

ಶ್ರೀನಿವಾಸ, ಚಂದ್ರಶೇಖರ ಪಟ್ಟಣಶೆಟ್ಟಿ, ಮುಖಂಡರಾದ ವೀರೇಶ ಚಿಂಚೋಳಿ, ಚಂದ್ರಶೇಖರ ದಂಡಿನ್, ಬಿ.ಎಂ.ಅಳ್ಳಿಕೋಟಿ, ಸಿದ್ದನಗೌಡ ಕರಿಬಾವಿ, ನಾನಗೌಡ ಪಾಟೀಲ, ಬಸವರಾಜ ಪಡಕೋಟಿ, ಅಮರೇಶ ಬಸನಗೌಡ್ರು, ಮೇಲಪ್ಪ ಗುಳಿಗಿ, ಬಸವರಾಜ ಮುಧೋಳ, ಅಮರೇಶ ಮುಧೋಳ, ಮೋತಿಲಾಲ್ ಚೌವ್ವಾಣ ಸೇರಿದಂತೆ ಇತರರು ಇದ್ದರು. ಅಮರಯ್ಯಸ್ವಾಮಿ ಜಾಲಿಬೆಂಚಿ ನಿರೂಪಿಸಿದರು. ಬಸವರಾಜ ವಜ್ಜಲ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-30-1781336606

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.