ಸುರಪುರ: ‘ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅಕ್ರಮ ಜಾನುವಾರು ಸಾಗಾಣಿಕೆ ಕಂಡುಬಂದಲ್ಲಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು’ ಎಂದು ಡಿವೈಎಸ್ಪಿ ಜಾವೇದ್ ಇನಾಮದಾರ್ ಹೇಳಿದರು.

ಇಲ್ಲಿಯ ಡಿವೈಎಸ್ಪಿ ಕಚೇರಿಯಲ್ಲಿ ಶನಿವಾರ ಜರುಗಿದ ಹಿಂದೂ ಸಂಘಟನೆಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಪೊಲೀಸರು ಮತ್ತು ಪಶು ವೈದ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾನೂನು ಕ್ರಮ ಜರುಗಿಸುತ್ತಾರೆ. ಈ ವಿಷಯದಲ್ಲಿ ನೈತಿಕ ಪೊಲೀಸ್ಗಿರಿ ಆಗುವುದು ಬೇಡ, ನಾವೇ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಇಲಾಖೆಗೆ ಮಾಹಿತಿ ನೀಡಿದರೆ ಸಾಕು’ ಎಂದರು.

‘ಅಕ್ರಮ ಸಾಗಾಟ ತಡೆಯಲು ಜಿಲ್ಲೆಯ ವಿವಿಧೆಡೆ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ. ಬಂಡೊಳ್ಳಿ, ಮಾಳೂರು, ಐಬಿ ತಾಂಡಾ ನಾರಾಯಣಪುರ, ಮುಡಬೋಳ ಮತ್ತು ಮಲ್ಲಾ.ಬಿ ಹತ್ತಿರ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗಿದ್ದು, ಪ್ರತಿ ಕೇಂದ್ರದಲ್ಲಿ ಒಬ್ಬ ಹೆಡ್ಕಾನ್ಸ್ಟೆಬಲ್ ಮತ್ತು ಕಾನ್ಸ್ಟೆಬಲ್ಗಳನ್ನು ನಿಯೋಜಿಸಲಾಗಿದೆ. ಜಿಲ್ಲೆಯ ಹೊರಗಿನಿಂದ ಬರುವ ವಾಹನಗಳ ಮೇಲೆ ತೀವ್ರ ನಿಗಾ ಇರಿಸಲಾಗುವುದು’ ಎಂದು ಹೇಳಿದರು.

‘ಕಳೆದ ಐದು ವರ್ಷಗಳಲ್ಲಿ ಜಾನುವಾರು ಕಳ್ಳತನ ಅಥವಾ ಅಕ್ರಮ ಸಾಗಾಟದಲ್ಲಿ ಭಾಗಿಯಾಗಿರುವವರನ್ನು ಎಂಒಬಿ ಪಟ್ಟಿಗೆ ಸೇರಿಸಲಾಗುತ್ತದೆ. ಅಂತಹ ವ್ಯಕ್ತಿಗಳ ಮೇಲೆ ಪ್ರಿವೆಂಟಿವ್ ಆಕ್ಷನ್ ರಿಪೋರ್ಟ್ (ಪಿಆರ್) ಸಿದ್ಧಪಡಿಸಿ, ಒಂದು ವರ್ಷದವರೆಗೆ ಯಾವುದೇ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗದಂತೆ ಬಾಂಡ್ ಪಡೆದುಕೊಳ್ಳಲಾಗುತ್ತದೆ’ ಎಂದರು.

‘ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದ ಕೆಡಿಸುವಂತಹ ಪೋಸ್ಟ್, ಶೇರ್ ಅಥವಾ ಕಾಮೆಂಟ್ ಮಾಡುವವರ ವಿರುದ್ಧ ಐಟಿ ಆಕ್ಟ್ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಪೊಲೀಸ್ ಇನ್ಸ್ಪೆಕ್ಟರ್ ಉಮೇಶ್ ನಾಯಕ, ಹಿಂದೂ ಪರ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-30-1346636645

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.