ಯಾದಗಿರಿ: ‘ಶಹಾಪುರ ತಾಲ್ಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರುಂ ಗಣಿಗಾರಿಕೆಯನ್ನು ತಡೆದು, ಹಲವು ವರ್ಷಗಳಿಂದ ಒಂದೇ ಕಡೆಯಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳನ್ನು ವರ್ಗವಣೆ ಮಾಡಿ, ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಯದೆ ಇದ್ದರೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ಪ್ರತಿಭಟನೆ ಮಾಡಲಾಗುವುದು’ ಎಂದು ಶಿವಸೇನಾ ರಾಜ್ಯಾಧ್ಯಕ್ಷ ಆಂದೋಲಾದ ಸಿದ್ದಲಿಂಗ ಸ್ವಾಮೀಜಿ ಹೇಳಿದರು.

‘ಪೊಲೀಸ್ ಇಲಾಖೆಯ ನಿಯಮಗಳ ಅನ್ವಯ ಅಧಿಕಾರಿಗಳು ಒಂದು ಠಾಣೆಯಲ್ಲಿ ಎರಡು ವರ್ಷಗಳು ಕೆಲಸ ಮಾಡಬಹುದು. ಆದರೆ, ಈ ನಿಯಮ ಶಹಾಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಪಾಲನೆ ಆಗುತ್ತಿಲ್ಲ. ಸಿಪಿಐಯೊಬ್ಬರು ಒಂದೇ ಠಾಣೆಯಲ್ಲಿದ್ದು ಸಾರ್ವಜನಿಕವಾಗಿ ದರ್ಪ ತೋರಿ ಇಲಾಖೆಯ ಘನತೆಗೆ ಧಕ್ಕೆ ತರುತ್ತಿದ್ದಾರೆ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

‘ಅಕ್ರಮ ಮರಳು, ಮರುಂ ಅವ್ಯಾಹತವಾಗಿ ನಡೆಯುತ್ತಿದೆ. ವಾಹನಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಸಾಗಿಸುತ್ತಿದ್ದರು ಅದಕ್ಕೆ ಕಡಿವಾಣ ಹಾಕುತ್ತಿಲ್ಲ. ಮರಳು, ಮರುಂ ಅಕ್ರಮದಿಂದ ಸರ್ಕಾರಕ್ಕೆ ಸಲ್ಲಬೇಕಾದ ರಾಜಧನ ತಪ್ಪುತ್ತಿದೆ. ಇದನ್ನು ತಡೆಯಲು ಯಾವೊಬ್ಬ ಅಧಿಕಾರಿಯೂ ಮುಂದಾಗುತ್ತಿಲ್ಲ. ಒಂದು ವೇಳೆ ಕ್ರಮಕ್ಕೆ ಮುಂದಾದರೂ ಅವರಿಗೆ ಬೆದರಿಕೆ ಹಾಕಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರ ರಾಜಕೀಯ ಪ್ರಭಾವದಿಂದಾಗಿ ಜಿಲ್ಲೆಯಲ್ಲಿ ರಿಪಬ್ಲಿಕ್ ಆಫ್ ಶಹಾಪುರ ಆಗುತ್ತಿದೆ’ ಎಂದು ದೂರಿದರು.

‘ದೇಶ, ಹಿಂದೂ ಧರ್ಮದ ರಕ್ಷಣೆಯ ಬಗ್ಗೆ ಮಾತನಾಡುವಂತಹ ಕನ್ಹೇರಿಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ, ಶಾಸಕ ರಾಜಾಸಿಂಗ್ ಅವರಂತಹವರಿಗೆ ನಿಷೇಧ ಮಾಡಿ, ಯಾರನ್ನೂ ರಕ್ಷಣೆ ಮಾಡುತ್ತಿದ್ದಿರಾ? ಅಕ್ರಮ ಚಟುವಟಿಕೆ, ಅಕ್ರಮ ಗಣಿಗಾರಿಕೆ ಮಾಡುವವರಿಗೆ ರಕ್ಷಣೆ ಕೊಡುತ್ತಿದ್ದರಾ’ ಎಂದು ಪ್ರಶ್ನಿಸಿದರು.

‘ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ತೆರಳಿದ್ದ ಸರ್ಕಾರದ ಪ್ರತಿನಿಧಿಗಳ ಕಾರುಗಳ ಮೇಲೆ ದಾಳಿಯಾಗಿತ್ತು. ಪೊಲೀಸರ ಮೇಲೂ ಹಲ್ಲೆಗೆ ಯತ್ನಿಸಲಾಗಿತ್ತು. ಈ ಸಂಬಂಧ ಗಲಭೆಕೋರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯಲು ಸಚಿವ ಸಂಪುಟ ನಿರ್ಧಿಸಿದ್ದು ಖಂಡನೀಯ. ಈ ಬಗ್ಗೆ ಹೈಕೋರ್ಟ್ ಮೋರೆ ಹೋಗುತ್ತೇವೆ’ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಶಿವಸೇನಾ ರಾಜ್ಯ ಕಾರ್ಯದರ್ಶಿ ವಿಜಯ ಪಾಟೀಲ, ಜಿಲ್ಲಾ ಅಧ್ಯಕ್ಷ ಚನ್ನಪ್ಪಗೌಡ, ಮುಖಂಡರಾದ ಶಶಾಂಕ ನಾಯಕ, ಎಂ.ಕೆ. ಮಾಲಿ ಪಾಟೀಲ, ಹಣಮಂತರಾಯ ಪಾಟೀಲ, ಬಸನಗೌಡ, ಅರುಣ ಕಡ್ಡಿ, ವಿದ್ಯಾನಂದಸ್ವಾಮಿ, ಮಲ್ಲಣ್ಣಗೌಡ ಕಟ್ಟಿ ಸಂಗಾವಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-30-941569233

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.