ಯಾದಗಿರಿ: ಗುರುಮಠಕಲ್ ತಾಲ್ಲೂಕಿನ ಚಲ್ಹೇರಿ ಗ್ರಾಮದ ಗಡಿ ವಿವಾದ ಹಾಗೂ ತೆಲಂಗಾಣ ರಾಜ್ಯದಿಂದ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ತಡೆಯುವಲ್ಲಿ ವಿಫಲವಾದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕೆಆರ್ಎಸ್ ಪಕ್ಷದ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಬುಧವಾರ ಪ್ರತಿಭಟನೆ ಮಾಡಿದರು.

‘ಗಡಿಭಾಗದ ತೆಲಂಗಾಣ ಸರ್ಕಾರದಿಂದ ಅಕ್ರಮ ಮರಳು ದಂಧೆ ತಡೆಗಟ್ಟಲು ವಿಫಲರಾದ ಮತ್ತು ಕರ್ತವ್ಯ ಲೋಪ ಎಸಗಿರುವ ಜಿಲ್ಲಾಧಿಕಾರಿಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು, ತಹಶೀಲ್ದಾರ್, ಪೊಲೀಸ್ ಠಾಣೆಯ ಸಿಬ್ಬಂದಿ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕು’ ಎಂದರು.

‘ಗಡಿಭಾಗದಲ್ಲಿ ಕಳೆದ ದೀರ್ಘಕಾಲದಿಂದ ಅಕ್ರಮ ಮರಳು ದಂಧೆ ಎಗ್ಗಿಲ್ಲದೆ ಸಾಗುತ್ತಿದ್ದು, ನೈಸರ್ಗಿಕ ಸಂಪತ್ತು ಲೂಟಿಯಾಗುತ್ತಿದೆ. ಈ ಕುರಿತು ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಗಡಿ ಭಾಗದಲ್ಲಿ ಉಪವಾಸ ಸತ್ಯಾಗ್ರಹಕ್ಕೂ ಬೆಲೆ ಸಿಕ್ಕಿಲ್ಲ. ಜಿಲ್ಲಾ ಕ್ರೀಡಾಂಗಣದ ಕಳಪೆ ಕಾಮಗಾರಿ ಬಗ್ಗೆ ಧರಣಿ ಕುಳಿತರೂ ಕ್ರಮವಾಗಿಲ್ಲ’ ಎಂದು ಹೇಳಿದರು.

‘ಹಳಿಗೇರಾ, ವರ್ಕನಳ್ಳಿ, ಮಸ್ಕನಳ್ಳಿ ಗ್ರಾಮಗಳ ಸೀಮೆಯಲ್ಲಿ ಗಣಿಗಾರಿಕೆ, ಬ್ಲಾಸ್ಟಿಂಗ್ನಿಂದಾಗಿ ಮನೆಗಳು ಬಿರುಕು ಬಿಟ್ಟಿವೆ. ರೈತರ ಬೆಳೆಗಳು ಸಹ ನಾಶವಾಗುತ್ತಿದ್ದು, ರಸ್ತೆಗಳು ಹಾಳಾಗಿವೆ. ಇದನ್ನು ತಡೆಗಟ್ಟಲು ಸಹ ಅಧಿಕಾರಿಗಳು ವಿಫಲರಾಗಿದ್ದಾರೆ’ ಎಂದು ದೂರಿದರು.

‘ಯಾದಗಿರಿ ಮತ್ತು ತೆಲಂಗಾಣ ಗಡಿಭಾಗದಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆಯನ್ನು ಸಂಪೂರ್ಣವಾಗಿ ತಡೆಗಟ್ಟಬೇಕು. ಈ ಬಗ್ಗೆ ತನಿಖೆ ನಡೆಸಿ, ಕ್ರಮ ಕೈಗೊಂಡು ದಂಡ ವಿಧಿಸಬೇಕು. ಚಲ್ಹೇರಿ ಗ್ರಾಮದ ಹಳ್ಳದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಮಾಡಿ, ಚೆಕ್ ಪೋಸ್ಟ್ ಮಾಡಬೇಕು’ ಎಂದು ಕೋರಿದರು.

ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಉಸ್ತುವಾರಿ ದೀಪಾ ಮನ್ನೂರ್, ಮುಖಂಡರಾದ ಎಸ್.ನಿಜಲಿಂಗಪ್ಪ ಪೂಜಾರಿ, ಜಗನ್ನಾಥ ಎಸ್.ಚಿಂತನಹಳ್ಳಿ, ಚಾಂದ್ ಪಾಷಾ ಮನಗನಾಳ, ಹಣಮಂತ ದೊರೆ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-30-1358625257

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.