ಯಾದಗಿರಿ: ‘ಮತಕ್ಷೇತ್ರ ವ್ಯಾಪ್ತಿಯಲ್ಲಿನ ಜಿಲ್ಲಾ ಕೇಂದ್ರ ಮತ್ತು ಗ್ರಾಮೀಣ ಭಾಗಗಳಲ್ಲಿನ ಮೂಲ ಸೌಲಭ್ಯಗಳ ಪೂರೈಕೆಗೆ ಆದ್ಯತೆ ನೀಡಲಾಗುತ್ತದೆ’ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಭರವಸೆ ನೀಡಿದರು.

ನಗರದ ಹೊಸಳ್ಳಿ ಕ್ರಾಸ್ ಹತ್ತಿರ ಲೋಕೋಪಯೋಗಿ ಇಲಾಖೆಯಿಂದ ಆಯೋಜಿಸಿದ್ದ ಜೆಸ್ಕಾಂ ಉಪವಿಭಾಗ ಕಚೇರಿಯವರೆಗಿನ ರಸ್ತೆ ಅಗಲೀಕರಣ, ವಿದ್ಯುತ್ ಸೌಕರ್ಯ, ವಿಭಜಕಗಳು ಮತ್ತು ಪಾದಚಾರಿ ಮಾರ್ಗ ನಿರ್ಮಾಣ ಹಾಗೂ ಡಾಂಬರೀಕರಣ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಯಾದಗಿರಿ ಜಿಲ್ಲಾ ಕೇಂದ್ರವಾಗಿ 15 ವರ್ಷ ಕಳೆದಿದೆ. ದಿನೇ ದಿನೇ ನಗರ ವಿಸ್ತರಿಸಿದ್ದು, ಜನ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ನಾನು ಶಾಸಕನಾದ ನಂತರ 3 ವರ್ಷಗಳಲ್ಲಿ ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಮೂಲಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ’ ಎಂದರು.

‘ಹೊಸಳ್ಳಿ ಕ್ರಾಸ್ನಲ್ಲಿ ಹೆಚ್ಚು ಜನ ಸಂದಣಿಯಿರುತ್ತದೆ. ಇಲ್ಲಿ ವಾಹನಗಳ ನಿಲುಗಡೆ, ಸುಗಮ ಸಂಚಾರಕ್ಕೆಂದು 900 ಮೀಟರ್ ರಸ್ತೆ ಅಗಲೀಕರಣ ಮತ್ತು ಒಟ್ಟು 4.8 ಕಿ.ಮೀ ರಸ್ತೆ ಮರು ಡಾಂಬರೀಕರಣದಿಂದ ಜನತೆಗೆ ಅನುಕೂಲವಾಗಲಿದೆ’ ಎಂದು ಹೇಳಿದರು.

‘ಮಳೆಗಾಲದ ವೇಳೆ ಹಳ್ಳಿಗಳಿಂದ ಬರುವವರಿಗೆ ಪಗಲಾಪೂರ ಸೇತುವೆ ಕಿರಿದಾಗಿದ್ದ ಕಾರಣ ತೊಂದರೆಯಾಗಿತ್ತು. ₹8 ಕೋಟಿ ಅನುದಾನದಲ್ಲಿ ದೊಡ್ಡ ಸೇತುವೆ ಮತ್ತು ರಸ್ತೆ ಸುಧಾರಣೆ ಕಾಮಗಾರಿಯಿಂದ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲಾಗಿದೆ. ಜತೆಗೆ ನಗರದ ಹತ್ತಿಕುಣಿ ಕ್ರಾಸ್ನಲ್ಲೂ ಕಾಮಗಾರಿಗೆ ₹5 ಕೋಟಿ ಮೀಸಲಿಡಲಾಗಿದೆ. ಶೀಘ್ರವೇ ಕಾಮಗಾರಿಗೆ ಚಾಲನೆ ನೀಡಲಾಗುವುದು’ ಎಂದರು.

ಮುಖಂಡ ಸುದರ್ಶನ ನಾಯಕ ಹಾಗೂ ಲೋಕೋಪಯೋಗಿ ಇಲಾಖೆ ಎಇಇ ಪರಶುರಾಮ ಮಾತನಾಡಿದರು.

ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಾಬುರಾವ ಕಾಡ್ಲೂರ, ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಈಟಿ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮರೆಪ್ಪ ಬಿಳ್ಹಾರ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಿಲೋಫರ್ ಬಾದಲ್, ಜಿಲ್ಲಾ ಕಾಂಗ್ರೆಸ್ ವಕ್ತಾರ ಶಾಮಸನ್ ಮಾಳಿಕೇರಿ, ಸುರೇಶ ಮಡ್ಡಿ, ಸಾಯಿಬಣ್ಣ ಬಾಡಿಯಾಳ, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಚಮರಡ್ಡಿ, ಇಮಾನವೆಲ್, ಮಲ್ಲಣ್ಣ ದಾಸನಕೇರಿ, ಬಸರಾಜಪ್ಪ ಬಾಗ್ಲಿ, ಗಣೇಶ ದುಪ್ಪಲ್ಲಿ, ಚನ್ನಕೇಶವಗೌಡ ಬಾಣತಿಹಾಳ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-30-923891438

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.