ಯಾದಗಿರಿ: ‘ಅಲೆಮಾರಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳ ಕಾಲೊನಿಗಳಿಗೆ ಮೂಲಸೌಕರ್ಯ ಒದಗಿಸಲು ವಿಶೇಷ ಗಮನ ನೀಡಬೇಕು. ಮೂಲಸೌಕರ್ಯ ಕಲ್ಪಿಸುವ ಬಗ್ಗೆ ಸಮಗ್ರ ಪ್ರಸ್ತಾವನೆ ರೂಪಿಸಿ ಸಲ್ಲಿಸಬೇಕು’ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಅಲೆಮಾರಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯಗಳ ಕುಂದುಕೊರತೆ ಸಭೆ ನಡೆಸಿ ಅವರು ಮಾತನಾಡಿದರು.

‘ಅಲೆಮಾರಿ ಸಮುದಾಯದ ಜನಾಂಗದವರಿಗೆ ಮನೆಗಳ ಹಾಗೂ ನಿವೇಶನದ ಅವಶ್ಯಕತೆ ಹೆಚ್ಚಾಗಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು. ರಸ್ತೆ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಮತ್ತಿತರ ಮೂಲಸೌಕರ್ಯಗಳನ್ನು ಆದ್ಯತೆ ಮೇಲೆ ಒದಗಿಸಬೇಕು’ ಎಂದರು.

ಕೆಂಭಾವಿಯಲ್ಲಿ ಕೆರೆ ವ್ಯಾಪ್ತಿಯಲ್ಲಿನ ನಿವೇಶನಗಳನ್ನು ಪರಿಶೀಲಿಸಿ, ಬೇರೆ ಕಡೆ ಭೂಮಿ ಲಭ್ಯತೆ ಬಗ್ಗೆ ವರದಿ ಸಲ್ಲಿಸಬೇಕು. ರಾಮಸಮುದ್ರದಲ್ಲಿ ಅಲೆಮಾರಿ ಜನಾಂಗದ ಕಾಲೊನಿಗೆ ತ್ರಿಫೇಸ್ ವಿದ್ಯುತ್ ಲೈನ್ ಒದಗಿಸುವ ಬಗ್ಗೆ ಪರಿಶೀಲಿಸಿ ವರದಿ ನೀಡಬೇಕು’ ಎಂದು ಸೂಚಿಸಿದರು.

‘ವಲಸೆ ಮತ್ತು ಇನ್ನಿತರ ಕಾರಣಗಳನ್ನು ಮುಂದಿಟ್ಟು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬಾರದು. ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನಿಗಾವಹಿಸಬೇಕು. ಅವರ ಭವಿಷ್ಯದ ಹಿತದೃಷ್ಟಿಯಿಂದ ಕಡ್ಡಾಯವಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ದೊರಕಿಸಿಕೊಡಬೇಕು’ ಎಂದರು.

ಕೆಂಭಾವಿ, ಹುಣಸಗಿ, ವರ್ಕನಳ್ಳಿ, ಗಿರಿನಗರ, ನಾಯ್ಕಲ್, ದೋರನಹಳ್ಳಿ, ಯಾದಗಿರಿ ಹೊಸಳ್ಳಿ ಕ್ರಾಸ್ ವ್ಯಾಪ್ತಿಯಲ್ಲಿ ರಸ್ತೆಗಳ ಮತ್ತು ಮನೆಗಳ ಸಮಸ್ಯೆ ಬಗ್ಗೆ ಸಮುದಾಯವರು ಜಿಲ್ಲಾಧಿಕಾರಿಯ ಗಮನಕ್ಕೆ ತಂದರು. ಈ ಕುರಿತು ಪರಿಶೀಲಿಸಿ ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಧರಣೇಶ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ವಿಜಯಕುಮಾರ ಮಡ್ಡೆ ಸೇರಿದಂತೆ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚನ್ನಬಸಪ್ಪ ಅವರು ಸ್ವಾಗತಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-30-1877084015

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.