ಯಾದಗಿರಿ: ಲೋಕಸಭೆಯಲ್ಲಿ ಶೇ 33ರಷ್ಟು ಮಹಿಳಾ ಮೀಸಲಾತಿ ಕಾನೂನಿಗೆ ಸಾಂವಿಧಾನಿಕ ತಿದ್ದುಪಡಿ ತರುವುದಕ್ಕೆ ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ ವಿರೋಧ ವ್ಯಕ್ತಪಡಿಸಿದ್ದನ್ನು ಖಂಡಿಸಿ, ಜೆಡಿಎಸ್ ಮಹಿಳಾ ಘಟಕದ ಮುಖಂಡರು ಇಲ್ಲಿನ ನೇತಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ವೃತ್ತದಲ್ಲಿ ಜಮಾಯಿಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ವಿರೋಧ ಪಕ್ಷಗಳ ವಿರುದ್ಧ ಪ್ರತಿಭಟನಾ ಫಲಕ ಪ್ರದರ್ಶಿಸಿ, ಘೋಷಣೆಗಳನ್ನು ಕೂಗಿದರು. ಮೀಸಲಾತಿ ವಿರೋಧಿಸಿರುವ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟವು ಮಹಿಳಾ ವಿರೋಧಿ ನೀತಿ ಅನುಸರಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವ ಮಹತ್ವಾಕಾಂಕ್ಷಿ ವಿಧೇಯಕಕ್ಕೆ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಅಸಹಕಾರ ನೀಡಿವೆ. ಬಹುಮತದ ಕೊರತೆಯಿಂದಾಗಿ ಮಸೂದೆ ಅಂಗೀಕಾರವಾಗದೆ, ಮೀಸಲಾತಿ ಜಾರಿಯಲ್ಲಿ ವಿಳಂಬ ಆಗುತ್ತಿರುವುದನ್ನು ಪಕ್ಷದ ಮಹಿಳಾ ಘಟಕವು ಖಂಡಿಸುತ್ತದೆ ಎಂದು ಪ್ರತಿಭಟನಕಾರರು ಹೇಳಿದರು.

ಮಹಿಳಾ ಸಬಲೀಕರಣದ ಬಗ್ಗೆ ಕೇವಲ ಮಾತನಾಡುತ್ತಾ, ಪ್ರಾಯೋಗಿಕವಾಗಿ ಹಕ್ಕು ನೀಡುವ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳ ನಡೆ ಮಹಿಳಾ ಸಮುದಾಯಕ್ಕೆ ಅಪಮಾನ ಮಾಡಿವೆ. ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಮಹಿಳೆಯರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ನೀಡಿ ಕ್ರಾಂತಿ ಮಾಡಿದ್ದರು ಎಂದರು.

ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಮಹಿಳಾ ಸಬಲೀಕರಣ ಮೀಸಲಾತಿ ಪ್ರಕ್ರಿಯೆಗೆ ವಿರೋಧ ಮಾಡಿರುವುದು ವಿಷಾದನೀಯವಾಗಿದೆ. ಸಂಸತ್ತಿನಲ್ಲಿ ಮಹಿಳಾ ಮೀಸಲಾತಿಯನ್ನು ಯಾವುದೇ ವಿಳಂಬ ಇಲ್ಲದೆ ಶೀಘ್ರವೇ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷೆ ನಾಗರತ್ನ ಅನಪುರ, ‘ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳಾ ಮೀಸಲಾತಿಯ ಮಸೂದೆ ಮಂಡಿಸಿ ಸುದೀರ್ಘವಾಗಿ ಚರ್ಚೆ ಮಾಡಿದ್ದರು. ಆದರೆ, ಪ್ರತಿ ಪಕ್ಷಗಳು ಪ್ರತಿಯೊಂದಕ್ಕೂ ವಿರೋಧ ಮಾಡುವಂತೆ ಮಹಿಳಾ ಮೀಸಲಾತಿಗೂ ಅಡ್ಡಿ ಮಾಡಿದ್ದಾರೆ. ಹಲವು ವರ್ಷಗಳಿಂದ ಮೀಸಲಾತಿ ಸಿಗುವ ನಿರೀಕ್ಷೆ ಇರಿಸಿಕೊಂಡಿದ್ದ ಮಹಿಳೆಯರಿಗೆ ನಿರಾಸೆಯಾಗಿದೆ. ಉದ್ದೇಶಿತ ಮಸೂದೆ ಪಾಸ್ ಆಗುವವರೆಗೂ ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳಿಗೆ ಮಹಿಳೆಯರು ಕ್ಷಮಿಸುವುದಿಲ್ಲ’ ಎಂದರು.

ಪ್ರತಿಭಟನೆಯಲ್ಲಿ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷಚಂದ್ರ ಕಟಕಟಿ, ಮುಖಂಡರಾದ ಶಾರದಾ ಕಡೇಚೂರ, ಜಯಶ್ರೀ ಪೊಲೀಸ್ ಪಾಟೀಲ, ನರ್ಮದಾ ಅವಂಗಪೂರ, ಪರಿಮಳ ಪಾಟೀಲ, ಅಶ್ವಿನಿ ಹೊಸಮನಿ, ಸಾವಿತ್ರಮ್ಮ ಯಡ್ಡಳ್ಳಿ, ವಿಜಯಲಕ್ಷ್ಮಿ ಹತ್ತಿಕುಣಿ, ಇಂದಿರಾ ಕೊಳ್ಳಿ, ಶಶಿಕಲಾ ಬಿರಾದಾರ, ಸಂಗೀತ ಚವ್ಹಾಣ್, ಅನಸೂಯಾ ದಂತಾಪೂರ, ಸಿದ್ಲಿಂಗಮ್ಮ ಯಲ್ಹೇರಿ, ವಿಶ್ವನಾಥ್ ಸಿರವಾರ, ಬಂದಪ್ಪ ಅರಳಿ, ಮಲ್ಲನಗೌಡ ಹಳಿಮನಿ ಕೌಳೂರ, ಮಂಜುಳಾ, ಶಂಕರಮ್ಮ, ಶೋಭಾ, ಕರಿಷ್ಮಾ ಸೇರಿ ಹಲವರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-30-1366413884

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.